Apply for the post of Guest Teacher
ಬೆಳಗಾವಿ: ತಾಲೂಕಿನ ಉಚಗಾವಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಿಗೆ ತಾತ್ಕಾಲಿಕವಾಗಿ 10 ತಿಂಗಳ ಅವಧಿಗೆ ಅತಿಥಿ ಶಿಕ್ಷಕಿ ಮತ್ತು ಆಯಾ ಹುದ್ದೆಗಳ ನೇಮಕಾತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮೇ 30ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಉಚಗಾವಿ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಮಾದರಿ ಶಾಲೆಯ ಮುಖ್ಯೋಪಾಧ್ಯಾಯರ ಕಚೇರಿಗೆ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.