ಬೆಳಗಾವಿಯ ಕೆಎಲ್‌ಇ ವೇಣುಧ್ವನಿ ಎಫ್‌ಎಂನಲ್ಲಿ ಗುರುವಾರ ಜರುಗಿದ ಫೋನ್ ಇನ್ ದಲ್ಲಿ ಡಾ.ರಿತೇಶ ವೆರ್ಣೆಕರ ಮಾತನಾಡಿದರು. ಮನಿಷ, ಮಂಜುನಾಥ ಪೈ ಇದ್ದಾರೆ.  
ಬೆಳಗಾವಿ

ವಿಶ್ವ ಕಿಡ್ನಿ ದಿನ ಕುರಿತು ಜಾಗೃತಿ

ಡಿ.ವಿ. ಕಮ್ಮಾರ
ಬೆಳಗಾವಿ: ಕೆಎಲ್‌ಇ ವೇಣುಧ್ವನಿ ಎಫ್.ಎಂ. ಕೇಂದ್ರದಲ್ಲಿ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಗುರುವಾರ ವಿಶ್ವ ಕಿಡ್ನಿ ದಿನ ಕುರಿತು ನೇರ ಫೋನ್ ಇನ್ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೆಎಲ್‌ಇ ಜವಾಹರಲಾಲ ನೆಹರು ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಹಾಗೂ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ತಜ್ಞ ವೈದ್ಯ ಡಾ.ರಿತೇಶ ವರ್ಣೆಕರ ಭಾಗವಹಿಸಿ ಕಿಡ್ನಿ ಸಮಸ್ಯೆಗಳಿಗೆ ಕಾರಣ, ಪರಿಹಾರ, ಮುಂಜಾಗೃತೆ ಕ್ರಮಗಳು ಮತ್ತು ಚಿಕಿತ್ಸೆ ಕುರಿತು ಜಾಗೃತಿ ಮೂಡಿಸಿದರು.
ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೆ ಗುರುವಾರದಂದು ವಿಶ್ವ ಮೂತ್ರಪಿಂಡ (ಕಿಡ್ನಿ) ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ ಎಲ್ಲರಿಗೂ ಕಿಡ್ನಿ ಆರೋಗ್ಯ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಕಿಡ್ನಿಯ ಆರೋಗ್ಯಕ್ಕೆ ನಾವು ಸೇವಿಸುವ ಆಹಾರವೂ ಕಾರಣವಾಗುತ್ತದೆ. ಆದ್ದರಿಂದ ಕಿಡ್ನಿಯ ಆರೋಗ್ಯವನ್ನು ಹೆಚ್ಚಿಸುವ ಒಳ್ಳೆಯ ಆಹಾರಗಳನ್ನು ಆಯ್ಕೆ ಮಾಡಿಕೊಳ್ಳುವುದು ಬಹಳ ಮುಖ್ಯ, ಅಧಿಕ ರಕ್ತದೊತ್ತಡ, ಸಕ್ಕೆರೆ ಕಾಯಿಲೆ ನಿರ್ಲಕ್ಷವೂ ಕಿಡ್ನಿಯ ಸಮಸ್ಯೆ ಉಲ್ಭನಕ್ಕೆ ಕಾರಣವಾಗುತ್ತದೆ, ಆದ್ದರಿಂದ ನಿಯಮಿತವಾಗಿ ಕಡ್ನಿ ಪರೀಕ್ಷಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ತಿಳಿಸಿದರು.
ಬೆಳಗಾವಿಯ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತೆಯಲ್ಲಿ ಕಿಡ್ನಿ ಸಮಸ್ಯೆಗಳಿಗೆ ಲಭ್ಯವಿರುವ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಚಿಕಿತ್ಸೆಗಳು, ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡ ಅವರು, ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ
ಕಾರ್ಯಕ್ರಮ ನಿರ್ವಾಹಕಿ ಮನಿಷ ಪಿ.ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.