ಬೆಳಗುಂದಿ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಹಾಫ್ ಪಿಚ್ ಪಂದ್ಯಾವಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಚಾಲನೆ ನೀಡಿದರು.  
ಬೆಳಗಾವಿ

ಬೆಳಗುಂದಿ ಚಾಂಪಿಯನ್ ಟ್ರೋಫಿ ಕ್ರಿಕೆಟ್‌ ಟೂರ್ನಿಗೆ ಚಾಲನೆ

ಬೆಳಗುಂದಿ ಚಾಂಪಿಯನ್ ಟ್ರೋಫಿ ಕ್ರಿಕೆಟ್‌ ಟೂರ್ನಿಗೆ ಚಾಲನೆ
Belagundi-champion-trophy-cricket-tournament start
ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬೆಳಗುಂದಿ ಗ್ರಾಮದಲ್ಲಿ ಶ್ರೀ ಗಜಾನನ ಸ್ಪೊರ್ಟ್ಸ್ ಕ್ಲಬ್ ಇವರ ಆಶ್ರಯದಲ್ಲಿ ಹಮ್ಮಿಕೊಂಡಿರುವ ಬೆಳಗುಂದಿ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಹಾಫ್ ಪಿಚ್ ಪಂದ್ಯಾವಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಚಿವರು, ಗ್ರಾಮೀಣ ಭಾಗದ ಕ್ರೀಡಾಪಟುಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಪಂದ್ಯಾವಳಿಗಳು ಉತ್ತಮ ವೇದಿಕೆಯಾಗಿದ್ದು, ಆಟಗಳಲ್ಲಿ ಸೋಲು-ಗೆಲುವಿಗಿಂತ ಕ್ರೀಡಾ ಮನೋಭಾವ ಮುಖ್ಯವಾಗಿದೆ. ಬೆಳಗುಂದಿ ಗ್ರಾಮದಲ್ಲಿ ಆಯೋಜನೆಗೊಂಡಿರುವ ಈ ಚಾಂಪಿಯನ್ ಟ್ರೋಫಿ ಸ್ಥಳೀಯ ಯುವಕರಲ್ಲಿ ಒಗ್ಗಟ್ಟು ಮತ್ತು ಕ್ರೀಡಾಸಕ್ತಿಯನ್ನು ಹೆಚ್ಚಿಸಲಿ ಎಂದು ಮನಪೂರ್ವಕವಾಗಿ ಹಾರೈಸುತ್ತೇನೆ ಎಂದರು.
ಈ ವೇಳೆ ಕಾಡಾ ಅಧ್ಯಕ್ಷರಾದ ಯುವರಾಜ್‌ ಕದಂ, ಮಹೇಶ್ ಪಾಟೀಲ, ಶಿವಾಜಿ ಬೋಕಡೆ, ಪ್ರಕಾಶ ಪಾಟೀಲ, ಬಾಳು ದೇಸೂರಕರ್, ಮನೋಹರ್ ಬೆಳಗಾಂವ್ಕರ್ ಮುಂತಾದವರು ಉಪಸ್ಥಿತರಿದ್ದರು.