ಬೆಳಗಾವಿ ನಗರದ ಸುವರ್ಣವಿಧಾನಸೌಧ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಕಾರ್ಯಕ್ರಮದಲ್ಲಿ ಸತೀಶ ಜಾರಕಿಹೊಳಿ ಮಾತನಾಡಿದರು. ಲಕ್ಷ್ಮೀ ಹೆಬ್ಬಾಳ್ಕರ್, ಗಣೇಶ ಹುಕ್ಕೇರಿ, ಮಹಾಂತೇಶ ಕೌಜಲಗಿ ಇತರರಿದ್ದರು. 
ಬೆಳಗಾವಿ

ರಾಜ್ಯಕ್ಕೆ ಮಾದರಿಯಾದ ಬೆಳಗಾವಿ ಜಿಪಂ ಕಾರ್ಯ

ಮಂಜುನಾಥ ಕೋಳಿಗುಡ್ಡ
ಬೆಳಗಾವಿ: ನಗರದ ಸುವರ್ಣವಿಧಾನಸೌಧ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿ ಶನಿವಾರ ಜರುಗಿದ ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಕಾರ್ಯಕ್ರಮದಲ್ಲಿ ಗ್ರಾಂ, ತಾಪಂ, ಜಿಪಂ ಅಧಿಕಾರಿ, ಸಿಬ್ಬಂದಿ ಸನ್ಮಾನ ಹಾಗೂ ಪ್ರತಿಯೊಬ್ಬರಿಗೆ ವಸ್ತ್ರ ಸಂಹಿತೆ ನೀತಿ ಪಾಲನೆ ರಾಜ್ಯಕ್ಕೆ ಮಾದರಿಯಾಗಿದೆ.
ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲೆಯ 500 ಗ್ರಾಪಂ, 14 ತಾಪಂ ಹಾಗೂ ಜಿಪಂನ 800ಕ್ಕೂ ಅಧಿಕ ಅಧಿಕಾರಿ, ಸಿಬ್ಬಂದಿಗೆ ಉಪಹಾರ, ಮಧ್ಯಾಹ್ನ ಊಟ ವ್ಯವಸ್ಥೆ ಮಾಡಲಾಗಿತ್ತು. ಇದು ರಾಜ್ಯದಲ್ಲಿಯೇ ವಿಶಿಷ್ಟ ಕಾರ್ಯಕ್ರಮವಾಗಿದ್ದು, ಇತರೆ ಜಿಪಂ ಮಾದರಿಯಾಗಿ ಪರಿಣಮಿಸಿದೆ.
ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ,ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಮಹಾತ್ಮಾ ಗಾಂಧೀಜಿ ಗ್ರಾಮ ಸ್ವರಾಜ್ಯ ಕನಸು ನನಸಾಗಿಸಲು ಗ್ರಾಮ ಆಡಳಿತಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಸರ್ಕಾರದ ವಿವಿಧ ಯೋಜನೆಗಳನ್ನು ತಳ ಮಟ್ಟದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಪಂಚಾಯತ ರಾಜ್ ಇಲಾಖೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಮಹಾತ್ಮಾ ಗಾಂಧೀಜಿ ಅವರು ಕಂಡಂತಹ ಗ್ರಾಮ್ ಸ್ವರಾಜ್ಯ ಹಾಗೂ ಮಹಿಳಾ ಸಬಲೀಕರಣದಲ್ಲಿ ಪಂಚಾಯತ್ ರಾಜ್ ಇಲಾಖೆ ಪಾತ್ರ ಮಹತ್ವದಾಗಿದೆ. ಯಾವುದೇ ಗ್ರಾಮಗಳ ಅಭಿವೃದ್ಧಿಯಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಬಹು ಮುಖ್ಯವಾಗಿದೆ. ಕ್ಷೇತ್ರದ ಅಭಿವೃದ್ಧಿಯಲ್ಲಿ ಸದಾ ಕೈಜೋಡಿಸುವ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.
ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ, ಶಾಸಕರುಗಳಾದ ಬಾಬಾಸಾಹೇಬ ಪಾಟೀಲ, ಗಣೇಶ ಹುಕ್ಕೇರಿ, ವಿಧಾನ ಪರಿಷತ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಂಜಯ ಶೆಟ್ಟಣ್ಣವರ, ಎಸ್‌ಪಿ ಕೆ.ರಾಮರಾಜನ್, ಜಿಪಂ ಉಪಕಾರ್ಯದರ್ಶಿಗಳಾದ ಬಸವರಾಜ ಹೆಗನಾಯಕ, ಬಸವರಾಜ ಅಡವಿಮಠ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಯೋಜನಾಧಿಕಾರಿ ರವಿ ಬಂಗಾರಪ್ಪನವರ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಇತರರಿದ್ದರು.
..........................
ಬಾಕ್ಸ್
ಸಾಧಕ ಅಧಿಕಾರಿಗಳಿಗೆ ಸನ್ಮಾನ
ನಗರದ ಸುವರ್ಣವಿಧಾನಸೌಧ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಕಾರ್ಯಕ್ರಮದಲ್ಲಿ ಸಾಧನೆ ಮಾಡಿದ್ದ ಗ್ರಾಪಂ, ತಾಪಂ,ಜಿಪಂ ಸೇರಿ 80ಕ್ಕೂ ಅಧಿಕ ಅಧಿಕಾರಿಗಳನ್ನು ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರು ಪ್ರರ್ಥಾನಾ ಪಾಟೀಲ ಅವರನ್ನು ಸಚಿವ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಸನ್ಮಾನಿಸಿ ಗೌರವಿಸಿದರು.
.........
ಕೋಟ್ಸ್
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಯಲ್ಲಿ ಅಧಿಕಾರಿ, ಸಿಬ್ಬಂದಿ ವರ್ಗದ ಪಾತ್ರ ದೊಡ್ಡದಿದೆ. ಕೆಲಸದ ಒತ್ತಡ ನಡುವೆ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹರಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಉತ್ತಮವಾಗಿ ಕಾರ್ಯನಿರ್ವಹಿಸುವ ಅಧಿಕಾರಿ, ಸಿಬ್ಬಂದಿಗಳನ್ನು ಗುರುತಿಸುವ ಕಾರ್ಯಕ್ರಮವಾಗಿದೆ.
- ರಾಹುಲ ಶಿಂಧೆ, ಜಿಪಂ ಸಿಇಒ
.