ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಲಿಂಗರಾಜು ಪಾಟೀಲ, ಸುಭಾಷ ಪಾಟೀ, ಗೀತಾ ಸುತಾರ, ಸಂಜಯ ಪಾಟೀಲ, ವಿರೂಪಾಕ್ಷ ಮಾಮನಿ ಇತರರಿದ್ದರು. 
ಬೆಳಗಾವಿ

ಸಚಿವ ನಾಗೇಂದ್ರ ವಜಾಕ್ಕೆ ಬಿಜೆಪಿ ಆಗ್ರಹ

ಬೆಳಗಾವಿ:

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಹಣ ಲೂಟಿ ಮಾಡಿರುವ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ಮರಳಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿರುವುದು ಖಂಡನೀಯ. ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ನಗರದ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಅವ್ಯವಹಾರ ನಥತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸುತ್ತಿರುವ ಬಿ. ನಾಗೇಂದ್ರ ಮರಳಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭ್ರಷ್ಟರನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಪರಿಶಿಷ್ಟರ ಹಣ ಲೂಟಿ ಕಳಂಕಿತನಿಗೆ ಮತ್ತೆ ಮಂತ್ರಿಗಿರಿ ಬಹುಮಾನ ನೀಡಿದೆ ಎಂದು ದೂರಿದರು.
ಈಗಾಗಲೇ ಕೋಟ್ಯಂತರ ರೂ. ಹಣ ಪ್ರಕರಣ ತನಿಖೆ ಪ್ರಗತಿಯಲ್ಲಿರುವಾಗಲೇ ಆರೋಪಿತನಿಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡುವ ಮೂಲಕ ಪರಿಶಿಷ್ಟರಿಗೆ ಅವಮಾನಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಭ್ರಷ್ಟಾಚಾರ ಶಿಕ್ಷೆಯಲ್ಲ. ರಕ್ಷಣೆಯೇ ಕಾಂಗ್ರೆಸ್ ನೀತಿ ಎಂಬ ಸಂದೇಶವನ್ನು ನೀಡಿದೆ. ಪರಿಶಿಷ್ಟರ ಹಣ ಲೂಟಿ ಮಾಡಿರುವ ವ್ಯಕ್ತಿಗೆ ಶಿಕ್ಷೆ ನೀಡುವ ಬದಲು ಸಚಿವ ಸ್ಥಾನ ನೀಡುತ್ತಿರುವುದು ಯಾವ ನ್ಯಾಯ. ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು. ಇಲ್ಲದಿದ್ದರೆ ನಿರಂತರ ಹೋರಾಟ ಮುಂದುವರಿಸಲಾಗುವುದು ಎಂದು ಕಾರ್ಯಕರ್ತರು ಎಚ್ಚರಿಸಿದರು.
ವಿಧಾನಪರಿಷತ್ ಸದಸ್ಯ ಲಿಂಗರಾಜು ಪಾಟೀಲ, ಬಿಜೆಪಿ ಗ್ರಾಮೀಣಾ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಮಾಜಿ ಶಾಸಕ ಸಂಜಯ ಪಾಟೀಲ, ಅರವಿಂದ ಪಾಟೀಲ, ಡಾ.ವಿಶ್ವನಾಥ ಪಾಟೀಲ, ವಿರೂಪಾಕ್ಷ ಮಾಮನಿ, ಸಚಿನ ಕಡಿ, ಮಲ್ಲಿಕಾರ್ಜುನ ಮಾದಮ್ಮನವರ, ಸಂದೀಪ ದೇಶಪಾಂಡೆ, ಧನಶ್ರೀ ದೇಸಾಯಿ, ಜಗದೀಶ ಬೂದಿಹಾಳ ಇತರರಿದ್ದರು.