ಗೋಕಾಕ ನಗರದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಪ್ರಶಿಕ್ಷಣ ಮಹಾಭಿಯಾನದ ಪ್ರಶಿಕ್ಷಣ ವರ್ಗವನ್ನು ಗಣ್ಯರು ಉದ್ಘಾಟಿಸಿದರು. ಸಂದೀಪ ದೇಶಪಾಂಡೆ, ಅಮರನಾಥ ಜಾರಕಿಹೊಳಿ, ಸುಭಾಸ ಪಾಟೀಲ, ಭೀಮಶಿ ಭರಮಣ್ಣವರ, ರಾಜೇಂದ್ರ ಗೌಡಪ್ಪಗೋಳ ಇತರರಿದ್ದರು.
ಗೋಕಾಕ: ಶಿಸ್ತಿಗೆ ಇನ್ನೊಂದು ಹೆಸರೇ ಬಿಜೆಪಿ. ನಮ್ಮ ಸಮಾಜಮುಖಿ ಕಾರ್ಯಗಳಿಂದ ಜನ ಗುರುತಿಸಬೇಕು. ಈ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕದ ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ ಹೇಳಿದರು.
ತಾಲೂಕಿನ ಅಂಕಲಗಿ ಪಟ್ಟಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲ ಮಟ್ಟದ ಪ್ರಶಿಕ್ಷಣ ಮಹಾಭಿಯಾನದ ಮೂರನೇ ತಂಡದ ಪ್ರಶಿಕ್ಷಣ ವರ್ಗದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಚುನಾವಣೆಯಲ್ಲಿ ಬೂತ್ ಮಟ್ಟವನ್ನು ಗೆಲ್ಲಿಸಿದರೆ ಭಾರತ ದೇಶವೇ ಗೆದ್ದಂತೆ. ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಗಿಂತ ದೇಶ ಮುಖ್ಯವಾಗಿದೆ ಎಂದು ಹೇಳಿದರು.
ಸಮಾರಂಭವನ್ನು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಉದ್ಘಾಟಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ವೇದಿಕೆ ಮೇಲೆ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಜಿಪಂ ಮಾಜಿ ಸದಸ್ಯರಾದ ಟಿ.ಆರ್.ಕಾಗಲ್, ಮಡ್ಡೆಪ್ಪ ತೋಳಿನವರ, ಭೀಮಗೌಡ ಪೊಲೀಸ್ ಗೌಡರ, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಹಣಮಸಾಗರ, ಜಿಲ್ಲಾ ಉಪಾಧ್ಯಕ್ಷ ಶಾಮಾನಂದ ಪೂಜೇರಿ, ಓಬಿಸಿ ರಾಷ್ಟ್ರೀಯ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಶಿ, ಬಿಜೆಪಿ ಹಿರಿಯ ಮುಖಂಡ ಪ್ರಮೋದ ಜೋಶಿ ಇತರರು ಇದ್ದರು. ರಾಜೇಶ್ವರಿ ವಡೇಯರ ನಿರೂಪಿಸಿ, ವಂದಿಸಿದರು.