ಬೆಳಗಾವಿ ನಗರದ ಖಾಸಗಿ ಹೋಟೆಲ್​ನಲ್ಲಿ ಮಂಗಳವಾರ ಬಿ.ಎಲ್​.ಸಂತೋಷ ಅವರನ್ನು ಬಾಲಚಂದ್ರ ಜಾರಕಿಹೊಳಿ, ಈರಣ್ಣ ಕಡಾಡಿ, ಮಹಾಂತೇಶ ಕಟವಗಿಮಠ ಬರಮಾಡಿಕೊಂಡರು. 
ಬೆಳಗಾವಿ

ಸಂತೋಷ ಜತೆ ಬಿಜೆಪಿ ಮುಖಂಡರ ಚರ್ಚೆ

ಬೆಳಗಾವಿ: ನಗರದ ಖಾಸಗಿ ಹೋಟೆಲ್​ನಲ್ಲಿ ಮಂಗಳವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್​.ಸಂತೋಷ ಅವರೊಂದಿಗೆ ಬೆಳಗಾವಿ ಜಿಲ್ಲೆಯ ಬಿಜೆಪಿ ಹಾಲಿ, ಮಾಜಿ ಶಾಸಕರು, ಮುಖಂಡರು ಸಭೆ ನಡೆಸಿದರು.
ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳವಾರ ನಗರಕ್ಕೆ ಆಗಮಿಸಿದ್ದ ಬಿ.ಎಲ್​.ಸಂತೋಷ ಅವರನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಬರಮಾಡಿಕೊಂಡರು. ರಾಜಕೀಯ ವಿದ್ಯಮಾನಗಳು, ಜಿಲ್ಲೆಯ ರಾಜಕೀಯ ಬೆಳವಣಿಗೆ, ಪಕ್ಷ ಸಂಟನೆ ಸೇರಿ ವಿವಿಧ ವಿಷಯಗಳ ಕುರಿತು ಸುದೀರ್ ಚರ್ಚೆ ನಡೆಸಿದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ ಪಾಟೀಲ, ಬೆಳಗಾವಿ ವಿಭಾಗೀಯ ಉಸ್ತುವಾರಿ ಸಂಜಯ ಪಾಟೀಲ, ಮಾಜಿ ಶಾಸಕರಾದ ಅನಿಲ ಬೆನಕೆ, ಜಗದೀಶ ಮೆಟಗುಡ್ಡ, ವಿಧಾನ ಪರಿಷತ್​ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯ ಸುಭಾಸ ಪಾಟೀಲ ಇತರರಿದ್ದರು.