ಯಳ್ಳೂರ ರಸ್ತೆಯಲ್ಲಿನ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯಲ್ಲಿ ಭಾನುವಾರ ಜರುಗಿದ ರಕ್ತದಾನ ಶಿಬಿರವನ್ನು ನವೀನ್ ಎನ್. ಉದ್ಘಾಟಿಸಿದರು. ಬ್ರಹ್ಮಕುಮಾರಿ ವಿದ್ಯಾ, ಡಾ.ಅಶೋಕ ಅಲತಗಿ, ಡಾ.ಜೀವನ ಜೋಶಿ, ಮಹಾದೇವ ವಾಲಿಶೆಟ್ಟಿ ಇತರರಿದ್ದರು.  
ಬೆಳಗಾವಿ

ರಕ್ತದಾನ ಮಹಾನ್ ಸೇವೆ

ಡಿ.ವಿ. ಕಮ್ಮಾರ

ಬೆಳಗಾವಿ :

ರಕ್ತದಾನವು ಮಹಾನ್ ಸೇವೆಯಾಗಿದೆ. ನಾವು ನೀಡುವ ರಕ್ತವು ಇನ್ನೊಬ್ಬರ ಜೀವ ಉಳಿಸುವ ಅಮೂಲ್ಯ ಕೊಡುಗೆಯಾಗುತ್ತದೆ. ರಕ್ತದ ಅವಶ್ಯಕತೆ ಇರುವ ಸಂದರ್ಭದಲ್ಲಿ ಯಾವುದೇ ವ್ಯಕ್ತಿಗೂ ಸಮಯಕ್ಕೆ ಸರಿಯಾಗಿ ರಕ್ತ ದೊರೆಯುವಂತೆ ಪ್ರತಿಯೊಬ್ಬ ಅರ್ಹ ನಾಗರಿಕರೂ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಬೇಕು ಎಂದು ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಎನ್. ಹೇಳಿದರು.

ಯಳ್ಳೂರ ರಸ್ತೆಯಲ್ಲಿನ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗಿನಿ ಡಾ.ಪ್ರಕಾಶಮಣಿ 19ನೇ ಪುಣ್ಯಸ್ಮರಣೆಯ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಈಚೆಗೆ ಆಸ್ಪತ್ರೆಯಲ್ಲಿ ಆರಂಭಗೊಂಡಿರುವ ಪರಿವರ್ತನ ಪುನರ್ವಸತಿ ಮತ್ತು ವ್ಯಸನಮುಕ್ತಿ ಘಟಕಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಅಗತ್ಯವಿರುವವರಿಗೆ ಸಮಗ್ರ ಪುನರ್ವಸತಿ ಹಾಗೂ ಬೆಂಬಲ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಈ ಘಟಕ ಕಾರ್ಯನಿರ್ವಹಿಸುತ್ತಿದೆ. ಇದರ ಸದುಪಯೋಗ ಸಾರ್ವಜನಿಕರು ಪಡೆದುಕೋಳ್ಳಬೇಕು ತಿಳಿಸಿದರು.
ಬ್ರಹ್ಮಕುಮಾರಿ ವಿದ್ಯಾ ಮಾತನಾಡಿ, ಬ್ರಹ್ಮಕುಮಾರಿ ಸಂಸ್ಥೆಯ ಉದ್ದೇಶಗಳು ಹಾಗೂ ಸಮಾಜಮುಖಿ ಚಟುವಟಿಕೆಗಳ ಕುರಿತು ಮತ್ತು ರಕ್ತ ಭಂಡಾರ ವಿಭಾಗದ ಮುಖ್ಯಸ್ಥ ಡಾ.ಅಶೋಕ ಅಲತಗಿ, ಸ್ವಯಂಪ್ರೇರಿತ ರಕ್ತದಾನದ ಮಹತ್ವ ವಿವರಿಸಿದರು. ಶಿಬಿರದಲ್ಲಿ ಒಟ್ಟು 20ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದರು.
ರಕ್ತ ಭಂಡಾರದ ವೈದ್ಯಾಧಿಕಾರಿ ಡಾ.ಜೀವನ ಜೋಶಿ, ಮಹಾದೇವ ವಾಲಿಶೆಟ್ಟಿ, ಬ್ರಹ್ಮಕುಮಾರಿ ಸಂಸ್ಥೆಯ ಮೀನಾಕ್ಷಿ, ಶೀತಲ್, ಭಾರತಿ, ವಿಜಯಾ ಕುಲಕರ್ಣಿ, ಕಾಶಿನಾಥ್, ಶ್ರೀಕಾಂತ ಇತರರಿದ್ದರು.