ಸವದತ್ತಿಯ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ತಾಪಂ ಇಒ ಆನಂದ ಬಡಕುಂದ್ರಿ ಅವರನ್ನು ಸನ್ಮಾನಿಸಲಾಯಿತು. ಮಲ್ಲಿಕಾರ್ಜುನ ಹೆಗ್ಗನ್ನವರ, ರತ್ನಾ ಕದಂ, ಎಂ.ಎ.ತಹಸೀಲ್ದಾರ್, ಎ್.ವೈ.ಗಾಜಿ ಇತರರು ಇದ್ದರು.
ನಗರದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಪಿಯುಸಿ, ಐಟಿಐ ದ್ವಿತೀಯ ವರ್ಷದ ಹಾಗೂ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಈಗಿನಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಆರಂಭಿಸಬೇಕು ಎಂದು ಸಲಹೆ ನೀಡಿದರು.
ದಿನನಿತ್ಯ ಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳುವುದು. ಸಾಮಾನ್ಯ ಜ್ಞಾನ ವದ್ಧಿ, ಸಮಯಪಾಲನೆ ಹಾಗೂ ಯೋಜಿತ ಅಧ್ಯಯನದಿಂದ ಯಶಸ್ಸು ಸಾಧಿಸಲು ಸಾಧ್ಯ ಎಂದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಬಡಕುಂದ್ರಿ ಮಾತನಾಡಿ, ಸರ್ಕಾರ ನೀಡುತ್ತಿರುವ ಸೌಲಭ್ಯ ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬೇಕು ಎಂದು ಹೇಳಿದರು.
ಸರ್ಕಾರಿ ಪದವಿ ಕಾಲೇಜಿನ ಉಪನ್ಯಾಸಕಿ ಶಕುಂತಲಾ ಅಜ್ಜನ್ನವರ, ಬೆಳಗಾವಿ ಜಿಲ್ಲಾ ದೌರ್ಜನ್ಯ ನಿಯಂತ್ರಣ, ಜಾಗತಿ ಹಾಗೂ ಉಸ್ತುವಾರಿ ಸಮಿತಿ ಸದಸ್ಯ ಬಸವರಾಜ ಆಯಟ್ಟಿ, ವಕೀಲ ಎ್.ವೈ.ಗಾಜಿ, ವಸತಿ
ನಿಲಯಪಾಲಕ ಎಂ.ಎ.ತಹಸೀಲ್ದಾರ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ನಿಲಯದ ವಿದ್ಯಾರ್ಥಿಗಳಾದ ಕೀರಪ್ಪ ಕುರಿ, ಸಂಗಮೇಶ ಗುಡಗಾರ,
ಪ್ರಮೋದ ಬಡಿಗೇರ, ರಂಗಪ್ಪ ಜಗ್ಗನ್ನವರ, ಕ್ರುಸಾಬ್ ವಟ್ನಾಳ, ಸಂತೋಷ ಕರಿಗಾರ ಹಾಗೂ ಅರಣ್ಯ ಇಲಾಖೆಯ ದೇಮಣ್ಣ ಈರಗಾರ ಅವರನ್ನು ಸನ್ಮಾನಿಸಲಾಯಿತು.ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರತ್ನಾ ಕದಂ ಅಧ್ಯಕ್ಷತೆ ವಹಿಸಿದ್ದರು. ಕುಮಾರೇಶ್ವರ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯ ಡಾ.ಎನ್.ಎಲ್.ಕಳ್ಳಿ, ಯರಗಟ್ಟಿ ಮೆಟ್ರಿಕ್ ಪೂರ್ವ ಬಾಲಕರ ನಿಲಯಪಾಲಕ ಉಮೇಶ ಅವರಾದಿ, ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಶ್ರೀಕಾಂತ ಇಂದಳಗಿ ಉಪಸ್ಥಿತರಿದ್ದರು.