ಬೆಳಗಾವಿ ನಗರದ ಕೆಎಲ್‌ಇ ವೇಣುಧ್ವನಿ 90.4 ಎಫ್‌ಎಂ ರೇಡಿಯೋ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಫೋನ್-ಇನ್ ಕಾರ್ಯಕ್ರಮದಲ್ಲಿ ಡಾ.ಕುಮಾರ ವಿಂಚುರಕರ್ ಮಾತನಾಡಿದರು. ಮನಿಷಾ ಪಿ.ಎಸ್., ಮಂಜುನಾಥ ಪೈ ಇತರರಿದ್ದರು. 
ಬೆಳಗಾವಿ

ಸೂಕ್ತ ಚಿಕಿತ್ಸೆಯಿಂದ ಕ್ಯಾನ್ಸರ್ ಗುಣಮುಖ

ಪ್ರಮುಖ ಮುಖ್ಯಾಂಶಗಳು

  • ಕೆಎಲ್‌ಇ ಆಸ್ಪತ್ರೆ ವೈದ್ಯ ಡಾ.ವಿಂಚುರಕರ್ ಹೇಳಿಕೆ
  • ಔಷಧೋಪಚಾರ ಕುರಿತು ಕೇಳುಗರಿಗೆ ಮಾಹಿತಿ
  • ಯುನೈಟೆಡ್ ಬೈ ಯುನಿಕ್ ಘೋಷವಾಕ್ಯ
ಬೆಳಗಾವಿ: ಪ್ರಾರಂಭಿಕ ಹಂತದಲ್ಲಿ ಕ್ಯಾನ್ಸರ್ ರೋಗ ಪತ್ತೆಹಚ್ಚುವ ಮೂಲಕ ಪರಿಣಾಮಕಾರಿ ಚಿಕಿತ್ಸೆ ನೀಡಿದರೆ ರೋಗಿಗಳ ಸಂಪೂರ್ಣ ಗುಣಮುಖರಾಗಲು ಸಾಧ್ಯವಿದೆ ಎಂದು ಕೆಎಲ್‌ಇ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಮತ್ತು ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ತಜ್ಞವೈದ್ಯ ಡಾ.ಕುಮಾರ ವಿಂಚುರಕರ್ ಹೇಳಿದರು.
ನಗರದ ಕೆಎಲ್‌ಇ ವೇಣುಧ್ವನಿ 90.4 ಎಫ್‌ಎಂ ರೇಡಿಯೋ ಕೇಂದ್ರ, ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಮತ್ತು ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಸಹಯೋಗದಲ್ಲಿ ಬುಧವಾರ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ನೇರ ಫೋನ್‌ಇನ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿವರ್ಷ ಫೆ.4ರಂದು ವಿಶ್ವ ಕ್ಯಾನ್ಸರ್ ದಿನವನ್ನು ಯೂನಿಯನ್ ಫಾರ್ ಇಂಟರನ್ಯಾಷನಲ್ ಕ್ಯಾನ್ಸರ್ ಕಂಟ್ರೋಲ್ ನೇತೃತ್ವದಲ್ಲಿ ಆಚರಿಸಲಾಗುತ್ತಿದೆ. ‘ಯುನೈಟೆಡ್ ಬೈ ಯುನಿಕ್’ ಎಂಬುದು ಈ ವರ್ಷದ ಘೋಷವಾಕ್ಯವಾಗಿದ್ದು, ಜನರಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕ್ಯಾನ್ಸರ್ ರೋಗ ಪತ್ತೆ, ತಡೆಗಟ್ಟುವಿಕೆ, ರೋಗದ ಲಕ್ಷಣಗಳು ಮತ್ತು ಚಿಕಿತ್ಸೆ ಕುರಿತು ಮಾಹಿತಿ ಹಂಚಿಕೊಂಡರು. ಕೆಎಲ್‌ಇ ಸಂಸ್ಥೆ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ಗೆ ಇರುವ ಚಿಕಿತ್ಸೆ ಮತ್ತು ಆಸ್ಪತ್ರೆಯಲ್ಲಿನ ಸೌಲಭ್ಯ ಕುರಿತು ತಿಳಿಸಿದರು.
ವೇಣುಧ್ವನಿ ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ.ಎಸ್.ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.