ಬೈಲಹೊಂಗಲ ತಹಸೀಲ್ದಾರ್ ಕಚೇರಿಯಲ್ಲಿ ಆದಾಯ ಮತ್ತು ಜಾತಿ ಪ್ರಮಾಣಪತ್ರ ವಿತರಣೆ ಅಭಿಯಾನಕ್ಕೆ ಶಾಸಕ ಮಹಾಂತೇಶ ಕೌಜಲಗಿ ಚಾಲನೆ ನೀಡಿದರು. ಸದಾಶಿವ ಮಕ್ಕೋಜಿ ಹಾಗೂ ಸಿಬ್ಬಂದಿ ಇದ್ದರು. 
ಬೆಳಗಾವಿ

ಮನೆ ಬಾಗಿಲಿಗೆ ಜಾತಿ, ಆದಾಯ ಪ್ರಮಾಣಪತ್ರ

ಬೈಲಹೊಂಗಲ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅರ್ಹ ನಾಗರಿಕರು ದಾಖಲೆಗಳ ಕೊರತೆಯಿಂದ ವಂಚಿತರಾಗಬಾರದೆಂಬ ಸದುದ್ದೇಶದಿಂದ ಜಾತಿ ಹಾಗೂ ಆದಾಯ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.


ತಹಸೀಲ್ದಾರ್ ಕಚೇರಿ ಆವರಣದಲ್ಲಿ ಜಾತಿ ಪ್ರಮಾಣಪತ್ರ ವಿತರಣೆ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿ, ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರ ಜನಪರ ಕಾರ್ಯಕ್ರಮ ರೂಪಿಸಿದ್ದು, ಸೌಲಭ್ಯ ಸದುಪಯೋಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ತಹಸೀಲ್ದಾರ್ ಸದಾಶಿವ ಮಕ್ಕೋಜಿ ಮಾತನಾಡಿ, ಜಿಲ್ಲಾಡಳಿತದಿಂದ ತಾಲೂಕಿನಲ್ಲಿ ಸುಮಾರು 1.78 ಲಕ್ಷ ಜಾತಿ ಹಾಗೂ ಆದಾಯ ಪ್ರಮಾಣಪತ್ರ ಉಚಿತ ವಿತರಿಸಲು ಅನುಮೋದನೆ ದೊರೆತಿದೆ. ಗ್ರಾಮೀಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ನಗರದಲ್ಲಿ ಆಯುಕ್ತರ ನೇತೃತ್ವದಲ್ಲಿ ಸಿಬ್ಬಂದಿ ಮನೆ ಮನೆಗೆ ತೆರಳಿ ಲಾನುಭವಿಗಳಿಗೆ ಪ್ರಮಾಣಪತ್ರ ವಿತರಿಸಲಿದ್ದಾರೆ ಎಂದರು. ಸಿಬ್ಬಂದಿ ಹಾಗೂ ಲಾನುಭವಿಗಳು ಇದ್ದರು.