ಬಾಲಚಂದ್ರ ಜಾರಕಿಹೊಳಿ 
ಬೆಳಗಾವಿ

ಗೋಕಾಕ, ಚಿಕ್ಕೋಡಿ ಜಿಲ್ಲೆ ಘೋಷಿಸಿ

ಗೋಕಾಕ, ಚಿಕ್ಕೋಡಿ ಜಿಲ್ಲೆ ಘೋಷಿಸಿ
ಶಾಸಕ ಬಾಲಚಂದ್ರ ಜಾರಕಿಹೊಳಿ ಆಗ್ರಹ
ಗೋಕಾಕ: ಭೌಗೋಳಿಕವಾಗಿ ದೊಡ್ಡದಾಗಿರುವ ಬೆಳಗಾವಿ ಜಿಲ್ಲೆ ವಿಭಜಿಸಿ ಗೋಕಾಕ ಮತ್ತು ಚಿಕ್ಕೋಡಿ ಹೊಸ ಜಿಲ್ಲಾ ಕೇಂದ್ರಗಳನ್ನಾಗಿ ಘೋಷಿಸಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ 40 ವರ್ಷಗಳಿಂದ ಗೋಕಾಕ ಜಿಲ್ಲೆ ರಚನೆಗಾಗಿ ನಮ್ಮವರು ಹೋರಾಟ ಮಾಡುತ್ತಿದ್ದಾರೆ. ಹಿಂದಿನ ಸರ್ಕಾರಗಳು ಜಿಲ್ಲಾ ರಚನೆಗಾಗಿ ನೇಮಿಸಿದ್ದ ನಾಲ್ಕು ಆಯೋಗಗಳು ಸಹ ಆಡಳಿತದ ಹಿತದೃಷ್ಟಿಯಿಂದ ಬೆಳಗಾವಿ ವಿಭಜಿಸಿ ಹೊಸ ಜಿಲ್ಲೆ ರಚನೆ ಮಾಡುವಂತೆಯೂ ಶಿಾರಸು ಮಾಡಿದ್ದವು ಎಂದು ತಿಳಿಸಿದರು.
ಅವಿಭಜಿತ ಗೋಕಾಕ ತಾಲೂಕಿನ ಮಠಾಧೀಶರು, ವಕೀಲರು, ವರ್ತಕರು, ವಿವಿಧ ಸಂಘಟನೆಗಳ ಪ್ರಮುಖರು ಹಾಗೂ ರಾಜಕೀಯ ಮುಖಂಡರು ಒಗ್ಗೂಡಿ ಗೋಕಾಕ ಜಿಲ್ಲಾ ಹೋರಾಟ ಸಮಿತಿ ನೇತೃತ್ವದಲ್ಲಿ ಪಕ್ಷಾತೀತವಾಗಿ ಹೋರಾಟ ಮಾಡುತ್ತ ಬಂದಿದ್ದೇವೆ. ಜನರಿಗೆ ಉತ್ತಮ ಆಡಳಿತ ನೀಡಲು ಬೆಳಗಾವಿ ಜಿಲ್ಲೆ ವಿಂಗಡಿಸುವುದು ಅಗತ್ಯವಾಗಿದೆ ಎಂದು ವಿವರಿಸಿದರು.
ಗೋಕಾಕ ಜಿಲ್ಲಾ ಕೇಂದ್ರ ರಚಿಸುವಂತೆ ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು ನನಗೆ ಮನವಿ ಸಲ್ಲಿಸಿದ್ದಾರೆ. ವಿವಿಧ ಮಠಾಧೀಶರು ಈ ಬಗ್ಗೆಯೂ ಚರ್ಚಿಸಿದ್ದಾರೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಿಗೂ ಮನವಿ ಮಾಡಿದ್ದೇನೆ ಎಂದು ಮಾಹಿತಿ ನೀಡಿದರು.
ಡಿ.8ರಂದು ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲದ ಚಳಿಗಾಲ ಅಧಿವೇಶನಕ್ಕೆ ಇಡೀ ಸರ್ಕಾರವೇ ಆಗಮಿಸಲಿದೆ. ಹೀಗಾಗಿ, ಮುಖ್ಯಮಂತ್ರಿಗಳು ಈ ಬಾರಿಯ ಅಧಿವೇಶನದಲ್ಲಿ ಗೋಕಾಕ ಮತ್ತು ಚಿಕ್ಕೋಡಿ ಜಿಲ್ಲೆ ೋಷಣೆ ಮಾಡಬೇಕೆಂದು ಒತ್ತಾಯಿಸಿದರು.