ಮಕ್ಕಳ ರಕ್ಷಣೆ ಕುರಿತ ತರಬೇತಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.  
ಬೆಳಗಾವಿ

ಮಕ್ಕಳ ರಕ್ಷಣೆ ಕಾನೂನುಗಳ ತರಬೇತಿ ಕಾರ್ಯಕ್ರಮ

ಡಿ.ವಿ. ಕಮ್ಮಾರ
ಬೆಳಗಾವಿ: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಶಾಲಾ ಮಕ್ಕಳಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಅಪರ್ಣಾ ಕೊಳ್ಳ ಮಾತನಾಡಿ, ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಯಡಿಯಲ್ಲಿ ಕಳೆದ ಸಾಲಿನಲ್ಲಿ ಪ್ರವೇಶ ಪಡೆದ ಮಕ್ಕಳ ದಾಖಲಾತಿ ಸಂಖ್ಯೆ ಎಷ್ಟು ಇರಬಹುದು ಜೊತೆಗೆ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಅಲ್ಲಿರುವ ಸಮಸ್ಯೆಗಳನ್ನು ಗುರುತಿಸುವುದು ಹಾಗೂ ಸ್ಪಂದಿಸುವುದು. ಜಿಲ್ಲೆಯಲ್ಲಿರುವ 06 ರಿಂದ 14 ವರ್ಷದೊಳಗಿನ ಎಲ್ಲ ಮಕ್ಕಳು ಕಡ್ಡಾಯವಾಗಿ ಶಿಕ್ಷಣ ಪಡೆಯುವ ಹಾಗೆ ನೋಡಿಕೊಳ್ಳುವುದು ನಿಮ್ಮ ಆದ್ಯ ಕರ್ತವ್ಯವಾಗಿರುತ್ತದೆ. ಯಾವುದೇ ಮಕ್ಕಳ ಶಿಕ್ಷಣದಿಂದ ವಂಚಿತರಾಗಬಾರದು ಅದರಂತೆ ಜಿಲ್ಲೆಯಲ್ಲಿ ಮಕ್ಕಳಿಗೆ ಯಾವುದೇ ಸಮಸ್ಯೆ ಇದ್ದಲ್ಲಿ ಮಕ್ಕಳ ಸಹಾಯವಾಣಿ-1098 ಗೆ ಕರೆ ಮಾಡಬಹುದು ಮಕ್ಕಳಿಗೆ ಯಾವುದೇ ಸಂದರ್ಭದಲ್ಲಿ ಉಚಿತ ಸೇವೆ ಒದಗಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ, ಮಕ್ಕಳ ವಿಶೇಷ ಪೊಲೀಸ್ ಘಟಕ ಅಧಿಕಾರಿ ರಘು ಜೆ. ಡಿಡಿಪಿಐ ಲೀಲಾವತಿ ಹಿರೇಮಠ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ.ಪರ್ವಿನ್. ಬಿಇಒ ವೈ.ಜೆ.ಭಜಂತ್ರಿ ಇತರರಿದ್ದರು.