ಚಿಂಚಣಿ ಸಿದ್ಧಸಂಸ್ಥಾನ ಮಠದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ವಿಪ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿದರು. ಶಾಸಕ ಗಣೇಶ ಹುಕ್ಕೇರಿ, ಶಿವಪ್ರಸಾದ ದೇವರು, ಮಹೇಶ ಭಾತೆ ಇತರರಿದ್ದರು. 
ಬೆಳಗಾವಿ

ಚಿಂಚಣಿ ಸಿದ್ಧಸಂಸ್ಥಾನ ಮಠದ ದಾಸೋಹ ಜಾತ್ರೆ ನಾಳೆಯಿಂದ

ತಾಲೂಕಿನ ಚಿಂಚಣಿ ಗ್ರಾಮದ ಸಿದ್ಧಸಂಸ್ಥಾನ ಮಠದ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶ್ರೀಮಠದ ಉತ್ತರಾಧಿಕಾರಿ ಶಿವಪ್ರಸಾದ ದೇವರ ನೇತೃತ್ವದಲ್ಲಿ ಜಾತ್ರೆ ನಡೆಯಲಿದ್ದು, ಬಸವಪುರಾಣ ಹಮ್ಮಿಕೊಳ್ಳಲಾಗಿದೆ ಎಂದರು.
ಶಾಸಕ ಗಣೇಶ ಹುಕ್ಕೇರಿ ಮಾತನಾಡಿ, ಚಿಂಚಣಿ ಸಿದ್ಧಸಂಸ್ಥಾನ ಮಠದ ಜಾತ್ರೆಯನ್ನು ಅದ್ದೂರಿಯಾಗಿ ಆಚರಿಸುವ ಮೂಲಕ ಜಾತ್ರೋತ್ಸವ ಯಶಸ್ವಿಗೊಳಿಸುವ ಹೊಣೆಗಾರಿಕೆ ನಮ್ಮೆಲ್ಲರದ್ದಾಗಿದೆ ಎಂದರು.
ಸಾನ್ನಿಧ್ಯ ವಹಿಸಿದ್ದ ಚಿಂಚಣಿ ಸಿದ್ಧಸಂಸ್ಥಾನ ಮಠದ ಶಿವಪ್ರಸಾದ ದೇವರು ಮಾತನಾಡಿ, ಮಾ.9ರಂದು ನಿಡಸೋಸಿ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಬಸವ ಪುರಾಣ ಪ್ರಾರಂಭವಾಗಲಿದ್ದು, ಮಾ.18ರವರೆಗೆ ನಿತ್ಯ ಸಂಜೆ 6.30 ಗಂಟೆಗೆ ಪುರಾಣ ನಡೆಯಲಿದೆ. ಮಾ.19ರಂದು ಚಾಂದನಿ ಏರುವುದು, ಬೆಳಗಾವಿ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯದಲ್ಲಿ ಅಲ್ಲಮಪ್ರಭು ಜಯಂತಿ ನಡೆಯಲಿದೆ. ಮಾ.20ರಂದು ಲಿಂಗದೀಕ್ಷೆ ಹಾಗೂ ಅಯ್ಯಚಾರ, ಮಾ.21ರಂದು ಬಸವ ಪುರಾಣ ಮಂಗಳೋತ್ಸವ, ಮಾ.23ರಂದು ಹೊಂಗಡೋತ್ಸವ, 25,000 ಸುಮಂಗಲೆಯರಿಗೆ ಉಡಿ ತುಂಬುವುದು ಹಾಗೂ ಮಹಾಪ್ರಸಾದ ಮೂಲಕ ಜಾತ್ರೆ ಸಂಪನ್ನಗೊಳ್ಳಲಿದೆ ಎಂದರು.
ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಮಹೇಶ ಭಾತೆ,