ಹುಕ್ಕೇರಿ ಪಟ್ಟಣ ಬಸ್ ನಿಲ್ದಾಣದ ಬಳಿ ಫುಟಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಯಿತು. 
ಬೆಳಗಾವಿ

ಜಾತ್ರೆಯಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಲಿ

ಹುಕ್ಕೇರಿ: ಗ್ರಾಮದೇವಿ ಜಾತ್ರಾ ಮಹೋತ್ಸವದಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಬೇಕು ಎಂದು ಉಪ ವಿಭಾಗಾಧಿಕಾರಿ ಶ್ರವಣಕುಮಾರ ನಾಯಕ ತಿಳಿಸಿದರು.
ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಈಚೆಗೆ ಲಕ್ಷ್ಮಿದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, ಜಾತ್ರೆಯಲ್ಲಿ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ರಸ್ತೆ, ನೀರು, ವಿದ್ಯುತ್, ಶೌಚಗೃಹ ಸೇರಿ ಮೂಲ ಸೌಲಭ್ಯ ಕಲ್ಪಿಸಬೇಕು ಎಂದರು.
ಡಿವೈಎಸ್ಪಿ ರವಿ ನಾಯಿಕ ಮಾತನಾಡಿ, ಅಹಿತಕರ ಘಟನೆ ತಡೆಯದಂತೆ ಸೂಕ್ತ ಪೊಲೀಸ್ ಸಿಬ್ಬಂದಿ ನಿಯೋಜಿಸುತ್ತೇವೆ. ಯುವಕರು ಹಿರಿಯರ ಮಾರ್ಗದರ್ಶನದಲ್ಲಿ ಜಾತ್ರೆ ಯಶಸ್ಸಿಗೆ ಕೈಜೋಡಿಸಬೇಕು. ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಪೊಲೀಸರಿಗೆ ತಿಳಿಸುವಂತೆ ಸೂಚಿಸಿದರು.
ಸಿಪಿಐ ಬಸ್ಸಾಪೂರೆ ಮಾತನಾಡಿ, ಎಲ್ಲೆಡೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಎಲ್ಲರೂ ಪೊಲೀಸ್ ಅಽಕಾರಿಗಳಿಗೆ ಸಹಕಾರ ನೀಡುವಂತೆ ವಿನಂತಿಸಿದರು.
ಮಾಜಿ ಸಚಿವ ಶಶಿಕಾಂತ ನಾಯಿಕ, ಸಲೀಂ ನದಾಫ್, ಜಾತ್ರಾ ಸಮಿತಿ ಅಧ್ಯಕ್ಷ ಬಾಪು ನಾಯಿಕ, ಕಾರ್ಯದರ್ಶಿ ಗುರು ಕುಲಕರ್ಣಿ, ಚಂದ್ರಶೇಖರ ಗಂಗಣ್ಣವರ, ರವಿ ಕರಾಳೆ, ಭೀಮಶಿ ಮುದಕ್ಕನವರ, ಚನ್ನಪ್ಪ ಗಜಬರ, ಆನಂದ ಗಂಧ, ತಮ್ಮಣಗೌಡ ಪಾಟೀಲ ಮಾತನಾಡಿದರು. ಗ್ರಾಮೀಣ ವಿದ್ಯುತ್ ಸಹಕಾರ ಸಂಘದ ಅಧ್ಯಕ್ಷ ಮಹಾವೀರ ನಿಲಜಗಿ, ಮಾಜಿ ಸಚಿವ ಶಶಿಕಾಂತ ನಾಯಿಕ, ತಹಸೀಲ್ದಾರ್ ಬಲರಾಮ ಕಟ್ಟಿಮನಿ, ಜಯಗೌಡ ಪಾಟೀಲ ಇತರರಿದ್ದರು. ಬಿ.ಕೆ.ಸಣ್ಣಕ್ಕಿ ನಿರೂಪಿಸಿದರು.