ಬೆಳಗಾವಿ ನಗರದ ಮಹಾನಗರ ಪಾಲಿಕೆ ಕಚೇರಿಯಲ್ಲಿ ಗುರುವಾರ ಸ್ಥಾಯಿ ಸಮಿತಿ ಅಧ್ಯಕ್ಷ ಕಚೇರಿ ಉದ್ಘಾಟಿಸಿದರು. ಪ್ರೀತಿ ಕಾಮಕರ, ಹನುಮಂತ ಕೊಂಗಾಲಿ, ಕಾರ್ತಿಕ.ಎಂ ಇತರರಿದ್ದರು. 
ಬೆಳಗಾವಿ

ಮಹಾನಗರದ ಸರ್ವತೋಮುಖ ಅಭಿವೃದ್ಧಿ ಬದ್ಧ

ಬೆಳಗಾವಿ:ಮಹಾನಗರದ ಸರ್ವತೋಮುಖ ಅಭಿವೃದ್ಧಿಗಾಗಿ ಸದಸ್ಯರು, ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಸಂಕಲ್ಪ ಮಾಡಬೇಕು ಎಂದು ಮೇಯರ ಪ್ರೀತಿ ಕಾಮಕರ್ ಹೇಳಿದರು.
ಪಾಲಿಕೆಯ ಕಚೇರಿಯಲ್ಲಿ ಗುರುವಾರ ನಾಲ್ಕು ಸ್ಥಾಯಿ ಸಮಿತಿ ಅಧ್ಯಕ್ಷ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಪಾಲಿಕೆಯಲ್ಲಿ ಲಭ್ಯವಿರುವ ಅನುದಾನದ ಆಧಾರದ ಮೇಲೆ ಎಲ್ಲ ವಾರ್ಡ್‌ಗಳಲ್ಲಿ ರಸ್ತೆ,ಚರಂಡಿ ಸೇರಿ ಮೂಲಭೂತ ಸೌಕರ್ಯ ಕೆಲಸ ಮಾಡಬೇಕಾಗಿದೆ. ಇದಕ್ಕಾಗಿ ಎಲ್ಲ ಸದಸ್ಯರು ಒಗ್ಗಟ್ಟಿನಿಂದ ಶ್ರಮಿಸಬೇಕಿದೆ. ರಾಜ್ಯ ಸರ್ಕಾರವು ವಿಶೇಷ ಅನುದಾನ ನೀಡಿದರೆ ಅಭಿವೃದ್ಧಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಉಪಮೇಯರ ಹನುಮಂತ ಕೊಂಗಾಲಿ ಮಾತನಾಡಿ, ಪಕ್ಷದರ ವರಿಷ್ಠರು, ಸದಸ್ಯರ ಒಮ್ಮತದಿಂದಲೇ ತೆರಿಗೆ ನಿರ್ಧರಣೆ, ಹಣಕಾಸು ಹಾಗೂ ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ಮೈಲುಗೋಳ,ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ರಾಜು ಭಾತಕಾಂಡೆ,ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೇಯಸ್ ನಾಕಾಡಿ, ಲೆಕ್ಕಗಳ ಸ್ಥಾಯಿ ಸಮಿತಿ ಅಧ್ಯಕ್ಷೆ ಸಾರಿಕಾ ಪಾಟೀಲ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಹೀಗಾಗಿ ಸಮಿತಿ ಅಧ್ಯಕ್ಷರು ಸಮರ್ಥವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಆಡಳಿತ ಪಕ್ಷದ ನಾಯಕ ಸಂತೋಷ ಪೇಡ್ನೇಕರ, ಉಪ ಆಯುಕ್ತ ಉದಕುಮಾರದ ಡಾ.ಸಿದ್ದು ಹುಲ್ಲೋಳ್ಳಿ, ತಳವಾರ, ಪಾಲಿಕೆ ಅಭಿವೃದ್ಧಿ ವಿಭಾಗದ ಉಪ ಆಯುಕ್ತೆ ಲಕ್ಷ್ಮೀ ನಿಪ್ಪಾಣಿಕರ, ರವಿ ದೋತ್ರೆ, ವೀಣಾ ವಿಜಾಪುರ ಇತರರಿದ್ದರು,
______