ದಡ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ಕಂಪ್ಯೂಟರ್ ತರಬೇತಿ ಕಾರ್ಯಾಗಾರದಲ್ಲಿ ಭಾರತಿ ಕಾಂಬಳೆ ಮಾತನಾಡಿದರು. ಭಾಗ್ಯಶ್ರೀ ಮಣ್ಣೂರ, ಎಂ.ಎಂ.ಪೂಜಾರ ಇತರರಿದ್ದರು.
ದಡ್ಡಿ: ಇಂದಿನ ತಂತ್ರಜ್ಞಾನ ಯುಗದಲ್ಲಿ ಎಲ್ಲ ಕೆಲಸ ಕಾರ್ಯಗಳು ಗಣಕಯಂತ್ರಗಳ ಮೂಲಕವೇ ನಡೆಯುತ್ತಿವೆ. ಕಂಪ್ಯೂಟರ್ ಶಿಕ್ಷಣ ಗ್ರಾಮೀಣ ಮಕ್ಕಳಿಗೂ ಅಗತ್ಯವಾಗಿದೆ ಎಂದು ಯೂತ್ ಫಾರ್ ಸೇವಾ ಸಂಸ್ಥೆಯ ಕಂಪ್ಯೂಟರ್ ಶಿಕ್ಷಕಿ ಭಾರತಿ ಕಾಂಬಳೆ ಅಭಿಪ್ರಾಯಪಟ್ಟರು.
ದಡ್ಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಈಚೆಗೆ ಯೂತ್ ಫಾರ್ ಸೇವಾ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ಕಂಪ್ಯೂಟರ್ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಹಕಾರಿಯಾಗಿದೆ. ಗ್ರಾಮೀಣ ಭಾಗದ ಮಕ್ಕಳು ಕಂಪ್ಯೂಟರ್ ಶಿಕ್ಷಣ ಪಡೆದು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದರು.
ಯೂತ್ ಫಾರ್ ಸೇವಾ ಸಂಸ್ಥೆಯ ಭಾಗ್ಯಶ್ರೀ ಮಣ್ಣೂರ, ಪ್ರಭಾರ ಮುಖ್ಯಶಿಕ್ಷಕ ಎಂ.ಎಂ.ಪೂಜಾರ ಇತರರಿದ್ದರು.