ಬೆಳಗಾವಿ ನಗರದಲ್ಲಿ ಬುಧವಾರ ಕೇಂದ್ರ ಬಜೆಟ್ ಕುರಿತು ಮಹಿಳಾ ಸಂವಾದ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಪ್ರಭಾಕರ ಕೋರೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗೌರವಿಸಿದರು. ಅಭಯ ಪಾಟೀಲ, ಮಹಾಂತೇಶ ಕವಟಗಿಮಠ, ಕೇಶವಾದಿ ಉಪಾಧ್ಯಾಯ ಇತರರಿದ್ದರು.  
ಬೆಳಗಾವಿ

ಬಡವರನ್ನು ನಿರ್ಮೂಲಿಸಿದ ಕಾಂಗ್ರೆಸ್

ಅರ್ಚನಾ ಜಾಧವ
ಬೆಳಗಾವಿ: ದೇಶದಲ್ಲಿ ಗರೀಬಿ ಹಟಾವೋ ಹೆಸರಿನಲ್ಲಿ 60 ವರ್ಷಕ್ಕಿಂತ ಹೆಚ್ಚು ಆಡಳಿತ ನಡೆಸಿದ ಕಾಂಗ್ರೆಸ್ ತನ್ನ ಅಧಿಕಾರ ಅವಧಿಯಲ್ಲಿ ಬಡತನ ನಿರ್ಮೂಲನೆ ಮಾಡದೇ ಬಡವರನ್ನು ನಿರ್ಮೂಲನೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.
ನಗರದ ಶಹಾಪುರ ಬಸವೇಶ್ವರ ಮಂಗಲ ಕಾರ್ಯಾ ಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೇಂದ್ರ ಬಜೆಟ್ ಕುರಿತು ಮಹಿಳಾ ಸಂವಾದ ಹಾಗೂ ಪದ್ಮಶ್ರೀ ಪುರಸ್ಕೃತ ಡಾ.ಪ್ರಭಾಕರ ಕೋರೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಗ್ಯಾರಂಟಿ ಹೆಸರಲ್ಲಿ ಭ್ರಷ್ಟಾಚಾರ, ದುರಾಡಳಿತವೆಸಗುತ್ತಿದೆ. ರಾಜ್ಯ ಅಭಿವೃದ್ಧಿಯಲ್ಲಿ ಹಿಂದೆಬಿದ್ದಿದೆ ಎಂದು ಟೀಕಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಸುಖಾಸುಮ್ಮನೇ ಪ್ರತಿಭಟನೆ ಮಾಡುವ ಮೂಲಕ ತನ್ನ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮೋದಿಯವರನ್ನು ಟೀಕಿಸುವುದೇ ಕೆಲಸವಾಗಿದೆ. ಅವರು ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ ಎಂದು ಆರೋಪಿಸಿದರು.
ಕೇಂದ್ರದಲ್ಲಿ ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡ ಬಳಿಕ ಜಗತ್ತಿನ 4ನೇ ಆರ್ಥಿಕ ಬಲಿಷ್ಠ ದೇಶವಾಗಿ ಭಾರತ ಹೊರಹೊಮ್ಮಿದೆ. ರೈತರು, ಮಹಿಳೆಯರು, ಯುವಕರು ಹಾಗೂ ಬಡಜನರ ಕಲ್ಯಾಣ ಯೋಜನೆಗಳನ್ನು ರೂಪಿಸಿ, ಅನುಷ್ಠಾನಗೊಳಿಸಿದ ಪ್ರಧಾನಿಗೆ ಅಭಿನಂದನೆ ಎಂದರು.
ದೇಶದ ಭದ್ರತೆಗಾಗಿ ಬಜೆಟ್‌ನಲ್ಲಿ ರಕ್ಷಣಾ ಕ್ಷೇತ್ರ, ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದಾರೆ. ದೇಶದ ಜನರು ಸ್ವಾಭಿಮಾನಿ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಲು ಬಜೆಟ್‌ನಲ್ಲಿ ಹಲವು ಯೋಜನೆ ಘೋಷಿಸಲಾಗಿದೆ. ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಕರ್ತರು, ಜನರಿಗೆ ತಿಳಿಸಬೇಕು ಎಂದು ಹೇಳಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ, ಶಾಸಕ ಅಭಯ ಪಾಟೀಲ, ಮಾಜಿ ಶಾಸಕ ಅರವಿಂದ ಪಾಟೀಲ, ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ, ಅರುಣ ಶಹಾಪುರ ಇತರರಿದ್ದರು.

ಪದ್ಮಶ್ರೀ ಜಿಲ್ಲೆಯ ಜನತೆಗೆ ಅರ್ಪಣೆ

"

ಪ್ರಧಾನಿ ನರೇಂದ್ರ ಮೋದಿ ಮಹಿಳಾ ಶಕ್ತಿಯನ್ನು ಗುರುತಿಸಿ ಮಹಿಳೆಯರಿಗೆ ಎಲ್ಲ ಕ್ಷೇತ್ರದಲ್ಲಿ ಸ್ಥಾನಮಾನ ಒದಗಿಸಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಹಣಕಾಸು ಮಂತ್ರಿಯಾಗಿ ಬಜೆಟ್ ಮಂಡಿಸಿದ ಕೀರ್ತಿ ನಿರ್ಮಲಾ ಸೀತಾರಾಮನ್ ಅವರಿಗೆ ಸಲ್ಲುತ್ತದೆ. ದೇಶದ ಆರ್ಥಿಕ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವಲ್ಲಿ ಮೋದಿಯವರು ಬಹಳಷ್ಟು ಶ್ರಮಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ಗ್ಯಾರಂಟಿ ಹೆಸರಲ್ಲಿ ಭ್ರಷ್ಟಾಚಾರ