ಬೆಳಗಾವಿ ಕಾಂಗ್ರೆಸ್ ಭವನ ಆವರನದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿನಯ ನಾವಲಗಟ್ಟಿ, ಪ್ರದೀಪ ಎಂ.ಜೆ., ರಾಜಾಸಲೀಂ ಕಾಶಿವಮನವರ ಇತರರಿದ್ದರು. 
ಬೆಳಗಾವಿ

ಮಲ್ಲಿಕಾರ್ಜುನ ಖರ್ಗೆಗೆ ಅಪಮಾನ ಕಾಂಗ್ರೆಸ್ ಪ್ರತಿಭಟನೆ

ಮಂಜುನಾಥ ಕೋಳಿಗುಡ್ಡ
ಬೆಳಗಾವಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಿದ ಸ್ಥಳಕ್ಕೆ ಗಂಗಾಜಲ ಸಿಂಪಡಿಸಿ ಶುದ್ಧೀಕರಣ ಗೊಳಿಸಿ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಶುಕ್ರವಾರ ನಗರದಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಭವನದಿಂದ ಆರ್‌ಟಿಒ ಬಳಿಯ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ನಾವಲಗಟ್ಟಿ ಮಾತನಾಡಿ, ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸ್ಥಳವನ್ನು ಗಂಗಾಜಲದಿಂದ ಶುದ್ಧೀಕರಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಹಾಗೂ ಖಂಡನೀಯ ಕೃತ್ಯ.ಶೋಷಣೆ ಮತ್ತು ದಬ್ಬಾಳಿಕೆಯ ವಿರುದ್ಧ ಹೋರಾಡಿ ಉನ್ನತ ಸ್ಥಾನಕ್ಕೇರಿರುವ ಖರ್ಗೆ ಅವರಿಗೆ ಮಾಡಿರುವ ಅಪಮಾನವನ್ನು ಸಹಿಸಲು ಸಾಧ್ಯವಿಲ್ಲ. ಈ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ.ಜೆ., ಪ್ರಚಾರ ಸಮಿತಿ ಅಧ್ಯಕ್ಷ ರಾಜಾಸಲೀಂ ಕಾಶಿಮನವರ್, ಬಸವರಾಜ ಶೇಗಾವಿ, ಪರಶುರಾಮ ವಗ್ಗಣ್ಣವರ, ಮಲ್ಲೇಶ್ ಚೌಗಲಾ, ರಾಜದೀಪ ಕೌಜಲಗಿ, ಸಿದ್ರಾಯ ಮೆಟ್ರಿ, ಆರ.ಪಿ. ಪಾಟೀಲ್, ಸಲೀಂ ಖತೀಬ, ಬಾಳೇಶ ದಾಸನಟ್ಟಿ ಇತರರಿದ್ದರು.