ಬೆಳಗಾವಿ ನಗರದ ಗೃಹ ಕಚೇರಿಯಲ್ಲಿ ಗುರುವಾರ ಲಕ್ಷ್ಮೀ ಹೆಬ್ಬಾಳ್ಕರ ಅವರು ಬಸವರಾಜ ಶೇಗಾವಿ ಹಾಗೂ ರಾಜಾಸಲೀಂ ಕಾಶೀಮನವರ ಸನ್ಮಾನಿಸಿದರು. ಮಲ್ಲೇಶ ಚೌಗುಲೆ ಇತರರಿದ್ದರು.
ಬೆಳಗಾವಿ:ಹಲವು ತಿಂಗಳಿನಿಂದ ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ ಸಮಿತಿಯ ಅಧ್ಯಕ್ಷರಾಗಿ ಬಸವರಾಜ ಶೇಗಾವಿ ಹಾಗೂ ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ರಾಜಾಸಲೀಂ ಕಾಶೀಮನವರ ಆಯ್ಕೆಯಾಗಿದ್ದಾರೆ.
ನೂತನ ಜವಾಬ್ದಾರಿ ವಹಿಸಿಕೊಂಡಿರುವ ಇಬ್ಬರೂ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಮೂಲಕ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಸದೃಢಗೊಳಿಸಬೇಕು ಪಕ್ಷದ ಮುಖಂಡರು ಆಶಿಸಿದ್ದಾರೆ.
ನಗರದ ಗೃಹ ಕಚೇರಿಯಲ್ಲಿ ಗುರುವಾರ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾಂಗ್ರೆಸ್ ಗಾಮೀಜಿ ಜಿಲ್ಲಾ, ನಗರ ಘಟಕದ ನೂತನ ಅಧ್ಯಕ್ಷರನ್ನು ಸನ್ಮಾನಿಸಿದರು. ಬಳಿಕ ಮಾತನಾಡಿ,ಕಾಂಗ್ರೆಸ್ ಪಕ್ಷದ ಸಂಘಟನೆ ಬಲಿಷ್ಠವಾಗಲು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನಿಂದ ಕೆಲಸ ಮಾಡುವುದು ಅತ್ಯಂತ ಮುಖ್ಯವಾಗಿದೆ. ನೂತನ ಅಧ್ಯಕ್ಷರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಸಂಘಟನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುತ್ತಾರೆ ಎಂಬ ವಿಶ್ವಾಸವಿದೆ.ಬಸವರಾಜ ಶೇಗಾವಿ ಹಾಗೂ ರಾಜಾಸಲೀಂ ಕಾಶೀಮನವರ ಅವರಿಗೆ ನೂತನ ಜವಾಬ್ದಾರಿಯಲ್ಲಿ ಯಶಸ್ಸು ದೊರೆಯಲಿ. ಪಕ್ಷದ ಸಂಘಟನೆಗೆ ಅವರ ಸೇವೆ ಇನ್ನಷ್ಟು ಪರಿಣಾಮಕಾರಿಯಾಗಲಿ ಎಂದು ಶುಭ ಹಾರೈಸಿದರು.
ಮಲ್ಲೇಶ ಚೌಗುಲೆ, ಪಕ್ಷದ ಪದಾಧಿಕಾರಿಗಳು ಇದ್ದರು.