ಹಿರೇಬಾಗೇವಾಡಿಯ ನೂತನ ಬಡಾವಣೆಗಳಲ್ಲಿ ಮೀಸಲಿಟ್ಟಿರುವ ಸರ್ಕಾರಿ ಜಾಗಗಳ ಬಗ್ಗೆ ನಿಖರ ಮಾಹಿತಿ ನೀಡುವಂತೆ ಗ್ರಾಮಸ್ಥರ ಪರವಾಗಿ ಬಿ.ಎಸ್.ಗಾಣಗಿ, ಉಮೇಶ ನಂದಿ ತಾಪಂ ಕಚೇರಿ ವ್ಯವಸ್ಥಾಪಕ ಅಧಿಕಾರಿಗೆ ಮನವಿ ಸಲ್ಲಿಸಿದರು. 
ಬೆಳಗಾವಿ

ಮೀಸಲು ಜಾಗಗಳ ಮಾಹಿತಿ ನೀಡಲು ಆಗ್ರಹ

ಮಾಹಿತಿ ಒದಗಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಯಶವಂತಕುಮಾರ ಅವರಿಗೆ ಸೋಮವಾರ ರೈತ ಮುಖಂಡರಾದ ಬಿ.ಎಸ್.ಗಾಣಗಿ ಮತ್ತು ಉಮೇಶ ನಂದಿ ಸಾರ್ವಜನಿಕರ ಸಹಿಯುಳ್ಳ ಮನವಿ ಪತ್ರ ಸಲ್ಲಿಸಿದರು.
ನೂತನವಾಗಿ ನಿರ್ಮಾಣಗೊಂಡ ಬಡಾವಣೆಗಳಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಮೀಸಲಿಟ್ಟಿರುವ ಜಾಗಗಳನ್ನು ಅಧಿಕಾರಿಗಳು ಮಾರಿಕೊಂಡಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಸಾರ್ವಜನಿಕರ ಅನುಮಾನ ಪರಿಹರಿಸುವ ನಿಟ್ಟಿನಲ್ಲಿ ವಿಶೇಷ ತನಿಖೆ ನಡೆಸಿ ಎಲ್ಲ ಗೊಂದಲಗಳಿಗೆ ತೆರೆ ಎಳೆಯಬೇಕೆಂದು ಮನವಿಯಲ್ಲಿ ಕೋರಿದ್ದಾರೆ.