ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್ತು ಸಭೆಯನ್ನು ಕಾರ್ತಿಕ್ ಎಂ. ಉದ್ಘಾಟಿಸಿದರು. ರವಿ ಬಂಗಾರೆಪ್ಪನವರ, ಬಿ.ಜೆ. ಗಂಗಾಯಿ, ಮಹದೇವ ಕಾಂಬಳೆ ಮತ್ತಿತರರು ಉಪಸ್ಥಿತರಿದ್ದರು. 
ಬೆಳಗಾವಿ

ಪ್ರಜಾಪ್ರಭುತ್ವ ವ್ಯವಸ್ಥೆ ಜಗತ್ತಿಗೆ ಮಾದರಿ

ಮಂಜುನಾಥ ಕೋಳಿಗುಡ್ಡ
ಬೆಳಗಾವಿ: ಅಪಾರ ಜನಸಂಖ್ಯೆ ಹಾಗೂ ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಜಗತ್ತಿಗೆ ಮಾದರಿಯಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಹೇಳಿದರು.
ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್ತು ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರ ಮೌಲಿಕ ವಿಚಾರಗಳನ್ನು ಒಳಗೊಂಡು ರಚನೆಯಾದ ಭಾರತದ ಸಂವಿಧಾನವು ಸಾಮಾಜಿಕ ನ್ಯಾಯ, ಸಮಾನತೆ, ಹಕ್ಕುಗಳು ಹಾಗೂ ಸ್ವಾತಂತ್ರ್ಯ ಸೇರಿದಂತೆ ಎಲ್ಲರನ್ನೂ ಒಳಗೊಂಡ ಪ್ರಜಾಪ್ರಭುತ್ವದ ಗಟ್ಟಿ ತಳಹದಿಯಾಗಿದೆ. ಈ ಹಿನ್ನೆಲೆಯಲ್ಲಿ ಯುವ ಸಂಸತ್ತು ಕಾರ್ಯಕ್ರಮವು ಇಂದಿನ ಯುವ ಪೀಳಿಗೆಗೆ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳನ್ನು ತಿಳಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದರು.
ಬೆಳಗಾವಿ ವಕೀಲರ ಸಂಘದ ಅಧ್ಯಕ್ಷ ಬಿ.ಜೆ. ಗಂಗಾಯಿ ಮಾತನಾಡಿ, ಭಾರತೀಯ ಪ್ರಜೆಗಳು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮಹತ್ವವನ್ನು ಅರಿತುಕೊಂಡಾಗ ತಮ್ಮ ಹಕ್ಕುಗಳನ್ನು ಅನುಭವಿಸುವುದರ ಜೊತೆಗೆ ಕರ್ತವ್ಯಗಳನ್ನು ಸಮರ್ಥವಾಗಿ ನಿಭಾಯಿಸಲು ಬದ್ಧರಾಗುತ್ತಾರೆ ಎಂದು ಹೇಳಿದರು.
ಮಹಾಂತೇಶ ನಗರದ ಬಿ.ಇಡಿ. ಕಾಲೇಜಿನ ಪ್ರಾಚಾರ್ಯ ಡಾ. ನಿರ್ಮಲಾ ಬಟ್ಟಲ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಕವೇ ಪ್ರಜೆಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಜಿಪಂ ಯೋಜನಾ ಅಧಿಕಾರಿ ರವಿ ಬಂಗಾರೆಪ್ಪನವರ, ಪಿಯು ಡಿಡಿ ಮಹದೇವ ಕಾಂಬಳೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಮಲ್ಲೇಶ ಚೌಗಲೆ, ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಪ್ರಕಾಶ ಕಟ್ಟಿಮನಿ, ನಿವೃತ್ತ ಅಭಿಯಂತರ ಡಿ.ವೈ. ಪವಾರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.