ಯಕ್ಸಂಬಾದ ಬೀರೇಶ್ವರ ಭವನದಲ್ಲಿ ಜೊಲ್ಲೆ ಎಜುಕೇಷನ್ ಸೊಸೈಟಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಣ್ಣಾಸಾಹೇಬ ಜೊಲ್ಲೆ ಮತ್ತು ಶಶಿಕಲಾ ಜೊಲ್ಲೆ ಅವರನ್ನು ಸನ್ಮಾನಿಸಲಾಯಿತು. ಶ್ರೀಕಾಂತ ಕುಲಕರ್ಣಿ, ಬಸವಪ್ರಸಾದ ಜೊಲ್ಲೆ, ಜ್ಯೋತಿಪ್ರಸಾದ ಜೊಲ್ಲೆ, ಸುಜಾತಾ ಕಬಾಡೆ, ಲತಾ ವಾಳಕೆ, ಎಂ.ಎಂ.ಪಾಟೀಲ ಇತರರಿದ್ದರು.
ಚಿಕ್ಕೋಡಿ:
ಯಕ್ಸಂಬಾದ ಬೀರೇಶ್ವರ ಭವನದಲ್ಲಿ ಬುಧವಾರ ಜೊಲ್ಲೆ ಎಜುಕೇಷನ್ ಸೊಸೈಟಿಯ ಶಿವಶಂಕರ ಜೊಲ್ಲೆ ಕನ್ನಡ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಬಸವಜ್ಯೋತಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ, ಸ್ವಾಗತ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಗಳಿಸುವ ಜ್ಞಾನ, ಶಿಸ್ತು, ಪ್ರಾಮಾಣಿಕತೆ ಮತ್ತು ಉತ್ತಮ ನಡವಳಿಕೆಯೇ ಯಶಸ್ಸಿಗೆ ಬುನಾದಿಯಾಗುತ್ತದೆ ಎಂದರು.
ಜೊಲ್ಲೆ ಸಮೂಹ ಸಂಸ್ಥೆ ಉಪಾಧ್ಯಕ್ಷ ಬಸವಪ್ರಸಾದ ಜೊಲ್ಲೆ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುವುದು ಜೊಲ್ಲೆ ಎಜುಕೇಷನ್ ಸೊಸೈಟಿಯ ಮುಖ್ಯ ಉದ್ದೇಶವಾಗಿದೆ ಎಂದರು.
ಉದ್ಯಮಿ ಶ್ರೀಕಾಂತ ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿಗಳು ನಿರಂತರ ಅಧ್ಯಯನ, ಸ್ಪಷ್ಟ ಗುರಿ ಹಾಗೂ ಆತ್ಮವಿಶ್ವಾಸದಿಂದ ಯಶಸ್ಸು ಸಾಧಿಸಬೇಕು. ಶಿಕ್ಷಕರು ಪಠ್ಯ ಬೋಧನೆಯೊಂದಿಗೆ ಜೀವನ ಮೌಲ್ಯಗಳನ್ನೂ ಕಲಿಸಬೇಕು ಎಂದರು.
ದೆಹಲಿಯ ಭಾರತೀಯ ಸಹಕಾರ ಸಂಘ (ಎನ್‌ಸಿಯುಐ) ನಿರ್ದೇಶಕರಾಗಿ ಆಯ್ಕೆಯಾದ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಸನ್ಮಾನಿಸಲಾಯಿತು. ವಿವಿಧ ಅಂಗಸಂಸ್ಥೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆ ಅಧ್ಯಕ್ಷ ಜ್ಯೋತಿಪ್ರಸಾದ ಜೊಲ್ಲೆ, ನಿರ್ದೇಶಕರಾದ ಸುಜಾತಾ ಕಬಾಡೆ, ಲತಾ ವಾಳಕೆ, ಸಂಸ್ಥೆಯ ಸಂಯೋಜಕ ಎಂ.ಎಂ.ಪಾಟೀಲ, ಪ್ರಾಂಶುಪಾಲ ಸಿ.ಪಿ.ಬನ್ನಟ್ಟಿ, ರವಿ ಕುರಬೇಟ, ಎ.ಬಿ.ಅಕ್ಕೋಳೆ, ಮುಖ್ಯಶಿಕ್ಷಕ ಆರ್.ಎಂ.ಹಿರೇಮಠ ಇತರರಿದ್ದರು. ಉಪನ್ಯಾಸಕ ಎಸ್.ಬಿ.ಮಾನೆ ಸ್ವಾಗತಿಸಿದರು. ಶಿಕ್ಷಕ ಎಚ್.ಎಸ್.ಮಾಳಗೆ ಮತ್ತು ವಿ.ಬಿ.ಖೋತ ನಿರೂಪಿಸಿದರು.