ಭೌತಶಾಸ್ತ್ರ ಜಾಗೃತಿ ಕಾರ್ಯಕ್ರಮ
ಬೆಳಗಾವಿ: ವಿಜ್ಞಾನ ವಿಷಯವನ್ನು ಪ್ರಾಯೋಗಿಕವಾಗಿ ತಿಳಿಸಿದರೆ ವಿದ್ಯಾರ್ಥಿ ಗಳಿಗೆ ಪರಿಣಾಮಕಾರಿಯಾಗಿ ಅರ್ಥ ವಾಗುತ್ತದೆ ಎಂದು ರಾಜಾಲಖಮಗೌಡ ವಿಜ್ಞಾನ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವಿನಯಕುಮಾರ ಎಂ. ಹೇಳಿದರು.
ನಗರದ ವಡಗಾವಿಯಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕೆಎಲ್ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ), ಭೌತಶಾಸ್ತ್ರ ಮತ್ತು ವಿದ್ಯುನ್ಮಾನ ವಿಭಾಗದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಭೌತಶಾಸ್ತ್ರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಲ್ಲಿರುವ ಸಂಶಯ ದೂರಮಾಡಲು ವಿಜ್ಞಾನ ಪ್ರಯೋಗ ಜಾಗೃತಿ ಕಾರ್ಯಕ್ರಮ ಸಹಕಾರಿಯಾಗಿವೆ.
ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು. ಡಾ.ಪ್ರವೀಣ ದೇವಾಂಗದ, ಅಲ್ಫಾಜ್ ಬಾಗವಾನ್, ರಚನಾ ಶೇರಿ, ವಿನಯ ಯರಗನವಿ ಇತರರಿದ್ದರು.