ಬೆಳಗಾವಿಯ ಜೆಎನ್‌ಎಂಸಿಯಲ್ಲಿ ಹಮ್ಮಿಕೊಂಡಿದ್ದ ಕ್ಷಯರೋಗ ದಿನಾಚರಣೆಯಲ್ಲಿ ಡಾ.ಸಂದೀಪ ಶ್ರೀವಾಸ್ತವ, ಡಾ.ವಿ.ಎಂ.ಪಟ್ಟಣಶೆಟ್ಟಿ, ಡಾ.ಐ.ಪಿ.ಗಡಾದ, ಡಾ.ಚಾಂದಿನಿ ದೇವಡಿ, ಡಾ.ನಯನಾ ಹಾಸಿಲಕರ ಇತರರಿದ್ದರು.
ಬೆಳಗಾವಿ: ಕ್ಷಯರೋಗ ಅತೀ ಪುರಾತನ ರೋಗ. ಅನಾದಿಕಾಲದಿಂದ ನಿಯಂತ್ರಣಕ್ಕಾಗಿ ಸಂಶೋಧನೆಗಳು ನಡೆಯುತ್ತಿವೆ. ಈ ರೋಗ ನಿಮೂರ್ಲನೆ ಮಾಡಬೇಕಾದಲ್ಲಿ ಜನ ಹಾಗೂ ಸಂಘ-ಸಂಸ್ಥೆಗಳು ಸಾಮೂಹಿಕ ಹೊಣೆಗಾರಿಕೆ ನಿಭಾಯಿಸಬೇಕಿದೆ ಎಂದು ಕಾಹೇರ್ ಜೆ.ಎನ್.ವೈದ್ಯಕೀಯ ಮಹಾವಿದ್ಯಾಲಯದ ಉಪ ಕುಲಪತಿ ಡಾ.ಸಂದೀಪ ಶ್ರೀವಾಸ್ತವ ಹೇಳಿದರು.
ಕಾಹೇರನ ಜೆ.ಎನ್. ವೈದ್ಯಕೀಯ ಮಹಾವಿದ್ಯಾಲಯ ಮೈಕ್ರೋಬಯಾಲಜಿ ಹಾಗೂ ಶ್ವಾಸಕೋಶ ವಿಭಾಗದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕ್ಷಯರೋಗ ನಿಯಂತ್ರಣ ವಿಭಾಗ, ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಶ್ವ ಕ್ಷಯರೋಗ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಜೆಎನ್‌ಎಂಸಿ ರಿಜಿಸ್ಟ್ರಾರ್ ಡಾ.ವಿ.ಎಂ.ಪಟ್ಟಣಶೆಟ್ಟಿ ಮಾತನಾಡಿ, ಸರ್ಕಾರಿ ಸಂಸ್ಥೆಗಳು ಕ್ಷಯರೋಗ ನಿಯಂತ್ರಣಕ್ಕಾಗಿ 1962ರಿಂದಲೂ ನಿರಂತರವಾಗಿ ಪ್ರಯತ್ನಿಸುತ್ತಿವೆ. ಖಾಸಗಿ ಆರೋಗ್ಯ ಸಂಸ್ಥೆಗಳು ಸರ್ಕಾರಗಳೊಂದಿಗೆ ಕೈಜೋಡಿಸಿ ಕ್ಷಯರೋಗ ನಿರ್ಮೂಲನೆ ಚಟುವಟಿಕೆಗಳನ್ನು ಜಂಟಿಯಾಗಿ ನಿರ್ವಹಿಸಿದಲ್ಲಿ ಯಶಸ್ಸು ಸಾಧಿಸಬಹುದಾಗಿದೆ ಎಂದರು.
ಡಿಎಚ್‌ಒ ಡಾ.ಐ.ಪಿ.ಗಡಾದ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಚಾಂದಿನಿ ದೇವಡಿ, ಕಾಲೇಜಿನ ಉಪ ಪ್ರಾಚಾರ್ಯೆ ಡಾ.ನಯನಾ ಹಾಸಿಲಕರ, ಭಾರತಿಯ ವೈದ್ಯಕೀಯ ಸಂಘದ ಪ್ರತಿನಿಧಿ ಡಾ.ಸಂತೋಷ ಗಾಡದವರ, ಶ್ವಾಸಕೋಶ ವಿಭಾಗದ ಮುಖ್ಯಸ್ಥೆ ಪ್ರೊ.ಭಾಗ್ಯಶ್ರೀ ಪಾಟೀಲ, ಮೈಕ್ರೋಬಯಾಲಜಿ ವಿಭಾಗದ ಮುಖ್ಯಸ್ಥ ಪ್ರೊ.ಶೀತಲ್ ಹರಕುಣಿ ಇತರರಿದ್ದರು.