ಕಾಗವಾಡ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಸಿವಿಲ್ ನ್ಯಾಯಾಧೀಶೆ ರೂಪಾ ಚಿನವರ ಮಾತನಾಡಿದರು. ಪಿ.ಎಸ್.ಕನ್ನಾಳ, ರವೀಂದ್ರ ಹಾದಿಮನಿ, ವೀರಣ್ಣ ವಾಲಿ ಇತರರಿದ್ದರು. ಕಾಗವಾಡ: ಪ್ರತಿಯೊಬ್ಬರಿಗೂ ಸಾಮಾನ್ಯ ಕಾನೂನು ಜ್ಞಾನ ಅಗತ್ಯವಾಗಿದ್ದು, ಕಾನೂನಿಗೆ ತಲೆಬಾಗಿ ನಡೆಯುವುದು ನಮ್ಮೆಲ್ಲರ ಕರ್ತವ್ಯ ಎಂದು ಕಾಗವಾಡ ಜೆಎಂಎ್ಸಿ ಸಿವಿಲ್ ನ್ಯಾಯಾಧೀಶೆ ರೂಪಾ ಚಿನವರ ಹೇಳಿದರು.
ಕಾಗವಾಡ: ಪಟ್ಟಣದ ಶಿವಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾಗವಾಡ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಪಟ್ಟಣ ಪಂಚಾಯಿತಿ, ಶಿವಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನ್ಯಾಯ ನಿಮ್ಮದು, ನೆರವು ನಮ್ಮದು ಎಂಬ ಧ್ಯೇಯದೊಂದಿಗೆ ಅಪರಾಧಗಳಿಂದ ಮಕ್ಕಳ ರಕ್ಷಣೆ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಮಕ್ಕಳ ರಕ್ಷಣೆಯ ಕುರಿತು ವಿವರಿಸಿದರು. ಕಾಗವಾಡ ವಕೀಲರ ಸಂಘದ ಅಧ್ಯಕ್ಷ ಪಿ.ಎಸ್.ಕನ್ನಾಳ, ತಹಸೀಲ್ದಾರ್ ರವೀಂದ್ರ ಹಾದಿಮನಿ, ತಾಪಂ ಇಒ ವೀರಣ್ಣ ವಾಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ.ಮಧಬಾವಿ, ಸರ್ಕಾರಿ ಅಭಿಯೋಜಕ ಬಸವರಾಜ ಕಾಂಬಳೆ, ಸಿಡಿಪಿಓ ಆರ್. ವಿ.ಗುದಗೆನ್ನವರ, ಪಪಂ ಮುಖ್ಯಾಧಿಕಾರಿ ಪಿ.ಎ.ಕಲ್ಯಾಣಶೆಟ್ಟಿ, ಪಿಎಸ್‌ಐ ಆರ್.ಎಸ್.ಖೋತ, ಶಿವಾನಂದ ಶಾಲೆಯ ಮುಖ್ಯಶಿಕ್ಷಕ ಎಸ್.ಆರ್.ಪಂಢರಪುರೆ ಇತರರಿದ್ದರು.