ಚಿಕ್ಕೋಡಿ ಕೆಎಲ್‌ಇ ಸಂಸ್ಥೆಯ ಬಿ.ಕೆ.ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ರೂಪಾಲಿ ಗುಡೋಡಗಿ ಅವರನ್ನು ಸನ್ಮಾನಿಸಲಾಯಿತು. ಡಾ.ಬಿ.ಜಿ.ಕುಲಕರ್ಣಿ, ಸುಧೀರ ಕೋಟಿವಾಲೆ ಇತರರಿದ್ದರು. 
ಬೆಳಗಾವಿ

ಧೈರ್ಯದಿಂದ ಪರಿಸ್ಥಿತಿ ಎದುರಿಸಿ

ವಿದ್ಯಾ ಶೆಟ್ಟನಗೌಡ್ರ
ಚಿಕ್ಕೋಡಿ: ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಉನ್ನತ ಸಾಧನೆ ಮಾಡುವ ಮೂಲಕ ದೇಶದ ಗೌರವ ಹೆಚ್ಚಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಂಚಾರ ಪಿಎಸ್‌ಐ ರೂಪಾಲಿ ಗುಡೋಡಗಿ ಹೇಳಿದರು.
ನಗರದ ಕೆಎಲ್‌ಇ ಸಂಸ್ಥೆಯ ಬಸವಪ್ರಭು ಕೋರೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಮಹಿಳಾ ಸಬಲೀಕರಣ ಘಟಕದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರು ಪುರುಷರಿಗೆ ಸಮನಾಗಿ ಎಲ್ಲ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದಾರೆ. ಧೈರ್ಯದಿಂದ ಪರಿಸ್ಥಿತಿ ಎದುರಿಸಬೇಕು ಎಂದರು.
ಪ್ರಾಚಾರ್ಯ ಡಾ.ಬಿ.ಜಿ.ಕುಲಕರ್ಣಿ ಮಾತನಾಡಿ, ಮಹಿಳೆಯರ ಕೊಡುಗೆ ಗೌರವಿಸುವುದರ ಜತೆಗೆ ಪ್ರೋತ್ಸಾಹ ನೀಡಬೇಕು. ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಿದಾಗ ದೇಶ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ತಿಳಿಸಿದರು.
ಉಪ ಪ್ರಾಚಾರ್ಯ ಸುಧೀರ ಕೋಟಿವಾಲೆ, ಸಂಯೋಜಕ ಡಾ.ವಿನಾಯಕ ಮಜಲಾಪುರ, ವಿದ್ಯಾರ್ಥಿ ಪ್ರತಿನಿಽ ಸಹನಾ ಮೇಘನ್ನವರ, ಡಾ.ಗೀತಾಂಜಲಿ ದೊಡ್ಡಮನಿ, ಅಂಕಿತಾ ಬಸಣ್ಣನವರ ಇತರರಿದ್ದರು.