ನಗರದ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸಚಿವ ಸತೀಶ ಜಾರಕಿಹೊಳಿಮಾತನಾಡಿ 
ಬೆಳಗಾವಿ

ಭ್ರಷ್ಟಾಚಾರ ಕೇಸ್‌ನಲ್ಲಿ ‘ಇಡಿ’ ದಾಳಿ ಮೊದಲ

ಮಂಜುನಾಥ ಕೋಳಿಗುಡ್ಡ
ಬೆಳಗಾವಿ:ಭ್ರಷ್ಟಾಚಾರ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಬಕಾರಿ ಇಲಾಖೆಯ ಬೆಳಗಾವಿ ವಿಭಾಗದ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ನಿವಾಸದ ಮೇಲೆ ನಡೆಸಿದ ದಾಳಿ ಇತಿಹಾಸದಲ್ಲಿ ಮೊದಲು. ಇದು ಯಾವ ರೀತಿ ತನಿಖೆ ನಡೆಯುತ್ತದೆ ಎಂಬುದು ಕಾದು ನೋಡೋಣ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಲೋಕಾಯುಕ್ತ ಸಂಸ್ಥೆ ಇದೆ. ಈ ಹಿಂದೆ ಪ್ರಕರಣವೊಂದನ್ನು ಹೈಕೋರ್ಟ್ ರದ್ದು ಮಾಡಿತ್ತು. ಬಳಿಕ ಹೊಸ ಪ್ರಕರಣ ದಾಖಲಾಗಿರುವ ಬಗ್ಗೆ ಮಾಹಿತಿ ಇಲ್ಲ. ಆದರೆ, , ಭ್ರಷ್ಟಾಚಾರ ಪ್ರಕರಣದಲ್ಲಿ ಇಂತಹ ದೊಡ್ಡ ಮಟ್ಟದ ದಾಳಿ ನಡೆದಿರುವುದು ಇದೇ ಮೊದಲ ಬಾರಿಗೆ.ಈಗ ಮತ್ತೆ ವಿಚಾರಣೆ ಮುಂದುವರಿದಿದೆ. ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಹೇಳಿದರು.
ಭ್ರಷ್ಟಾಚಾರ ಪ್ರಕರಣದಲ್ಲಿ ಇಷ್ಟು ದೊಡ್ಡ ಪ್ರಮಾಣದ ದಾಳಿ ನಡೆದಿರುವುದರಿಂದ ಕೆಲ ಗೊಂದಲಗಳು ಸೃಷ್ಟಿಯಾಗಿವೆ. ವೈ. ಮಂಜುನಾಥ ಯಾವ ರೀತಿ ಕಾನೂನು ಹೋರಾಟ ನಡೆಸಲಿದ್ದಾರೆ. ಭ್ರಷ್ಟಾಚಾರ ಎನ್ನುವುದು ಯಾವುದೇ ಒಂದು ಇಲಾಖೆಗೆ ಸೀಮಿತವಲ್ಲ. ವೈ. ಮಂಜುನಾಥ ಕೇವಲ ಜಾರಕಿಹೊಳಿ ಕುಟುಂಬದ ಸಂಬಂಧದ ಕಾರಣಕ್ಕೆ ದಾಳಿ ನಡೆದಿದೆ ಎಂಬ ಮಾಹಿತಿ ನನ್ನ ಬಳಿ ಇಲ್ಲ. ತನಿಖೆ ಮುಗಿದ ಬಳಿಕ ಸತ್ಯ ಹೊರಬರಲಿದೆ. ಈ ಹಂತದಲ್ಲಿ ಅದನ್ನು ರಾಜಕೀಯ ಪ್ರೇರಿತ ಎಂದು ಹೇಳಲು ಸಾಧ್ಯವಿಲ್ಲ. ಒಬ್ಬರು ಸರ್ಕಾರಿ ನೌಕರರಾದ ಬಳಿಕ ಅವರ ಸೇವೆಗೆ ಕಾನೂನು ವ್ಯವಸ್ಥೆ ಇರುತ್ತದೆ ಎಂದರು.
2028ರ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಇಂತಹ ಬೆಳವಣಿಗೆಗಳು ನಡೆಯುತ್ತವೆ. ಭ್ರಷ್ಟಾಚಾರದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂಬ ಅರ್ಥದಲ್ಲಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಹೇಳಿಕೆ ನೀಡಿರಬಹುದು ಎಂದು ಹೇಳಿದ್ದಾರೆ ಎಂದರು.
..................
ಬಾಕ್ಸ್
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ನಿಜ
ಕಳೆದ ಎರಡು ತಿಂಗಳಿಂದೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಚರ್ಚೆ ಆಗಿತ್ತು. ಸಚಿವ ಸ್ಥಾನದ ಜತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ನಮ್ಮದು ಬೇಡಿಕೆಯಾಗಿತ್ತು.ಆದರೆ, ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮದ ಹಿನ್ನೆಲೆ ಅಧ್ಯಕ್ಷ ಸ್ಥಾನ ಕೈಬಿಟ್ಟು ಸಚಿವ ಸ್ಥಾನ ಆಯ್ಕೆ ಮಾಡಿಕೊಂಡಿದ್ದೇನೆ.ಕೆಪಿಸಿಸಿ ಅಧ್ಯಕ್ಷರಾಗುವ ಅವಕಾಶ ಮೊದಲು ನನಗೆ ಇತ್ತು ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.