ಚನ್ನಮ್ಮನ ಕಿತ್ತೂರು ತಹಸೀಲ್ದಾರ್ ಕಲಗೌಡ ಪಾಟೀಲ ಅವರಿಗೆ ಮಾಜಿ ಶಾಸಕ ಮಹಾಂತೇಶ ದೊಡಗೌಡರ ಮನವಿ ಸಲ್ಲಿಸಿದರು. ಶ್ರೀಕಾರ ಕುಲಕರ್ಣಿ, ಬಸವರಾಜ ಮಾತನವರ, ಬಸವನಗೌಡ ಸಿದ್ರಾಮನಿ, ವಿಜಯಕುಮಾರ ಶಿಂಧೆ ಇತರರಿದ್ದರು.
ಚನ್ನಮ್ಮನ ಕಿತ್ತೂರು: ಗ್ಯಾರಂಟಿ ಯೋಜನೆಯಿಂದ ಸರ್ಕಾರ ದಿವಾಳಿಯಾಗಿದ್ದು, ಅಭಿವದ್ಧಿ ಕೆಲಸಗಳಿಗೆ ದುಡ್ಡಿಲ್ಲ. ವಿವಿಧ ಯೋಜನೆಗಳ ಹೆಸರಿನಲ್ಲಿ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಮಾಜಿ ಶಾಸಕ ಮಹಾಂತೇಶ ದೊಡಗೌಡರ ಆರೋಪಿಸಿದರು.
ಕಾಂಗ್ರೆಸ್ ಸರ್ಕಾರದ ದುರಾಡಳಿತ ವಿರೋಧಿಸಿ ಬಿಜೆಪಿ ಕಿತ್ತೂರು ಮಂಡಳದಿಂದ ರಾಷ್ಟ್ರೀಯ ಹೆದ್ದಾರಿಯ ರಾಣಿ ಚನ್ನಮ್ಮ ವತ್ತದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಜನರ ನಂಬಿಕೆಗೆ ದ್ರೋಹ ಮಾಡುತ್ತಿದೆ. ಅತಿವಷಿ,್ಟ ಅನಾವಷ್ಟಿಯಿಂದ ರೈತರು ಕಷ್ಟ ಅನುಭವಿಸುತ್ತಿದ್ದಾರೆ. ಆದರೆ, ಸರ್ಕಾರ ಕುರ್ಚಿ ಕದನದಲ್ಲಿ ತೊಡಗಿ ರೈತರಿಗೆ ನಯಾಪೈಸೆ ಪರಿಹಾರ ನೀಡಿಲ್ಲ. ವಿಧವಾ ವೇತನ, ಅಂಗವಿಕಲರ ವೇತನ ಹೀಗೆ ಅನೇಕ ಸರ್ಕಾರಿ ಯೋಜನೆ ಜನರಿಗೆ ತಲುಪುತ್ತಿಲ್ಲ. ಗ್ಯಾರಂಟಿ ಯೋಜನೆಗಳ ಹಣ ಜನರ ಖಾತೆಗೆ ಬರುತ್ತಿಲ್ಲ. ರಸ್ತೆಗಳಲ್ಲಿ ಗುಂಡಿಗಳಿಂದ ಅಪಘಾತವಾಗಿ ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ಅಭಿವದ್ಧಿ ಕೆಲಸ ಮಾಡದ ಸರ್ಕಾರ ನಿದ್ದೆಗೆ ಹೋಗಿದೆ ಎಂದರು.
ಚನ್ನವಷಭೇಂದ್ರ ನೀರಾವರಿ ಯೋಜನೆಗೆ ಕೆಲಸ ನಿಧಾನಗತಿಯಲ್ಲಿ ಸಾಗಿದೆ. 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಹಾಗೂ ಚನ್ನಮ್ಮ ಅರಮನೆ ಯಾವಾಗ ಕಟ್ಟುತ್ತೀರಿ ಎಂದು ಪ್ರಶ್ನಿಸಿದರು.