ಹಾರೂಗೇರಿ ವಿಠ್ಠಲ-ರುಕ್ಮಿಣಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ಸಿದ್ಧೇಶ್ವರ ಸ್ವಾಮೀಜಿ, ವಸಂತ ಲಾಳಿ ಚಾಲನೆ ನೀಡಿದರು. ಹನಮಂತ ಯಲಶೆಟ್ಟಿ, ನಾರಾಯಣ, ಮಾರುತಿ ಧರ್ಮಟ್ಟಿ, ಸಹದೇವ ಲಾಳಿ ಇತರರಿದ್ದರು.
ಹಾರೂಗೇರಿ: ಡಾ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಜನರ ಪ್ರಗತಿಗೆ ಹಲವಾರು ಕಾರ್ಯಕ್ರಮ ಹಮ್ಮಿಕೊಂಡು, ಸ್ವಾವಲಂಬಿ ಜೀವನ ಸಾಗಿಸಲು ಸಹಕಾರಿಯಾಗಿದೆ ಎಂದು ಇಟನಾಳದ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.
ಪಟ್ಟಣದ ಶ್ರೀ ವಿಠ್ಠಲ-ರುಕ್ಮಿಣಿ ದೇವಸ್ಥಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಎಲ್ಲರೂ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಶ್ರದ್ಧಾ ಕ್ರೆಡಿಟ್ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಹನುಮಂತ ಯಲಶೆಟ್ಟಿ ಮಾತನಾಡಿ, ಜನರ ಆರ್ಥಿಕ ಪ್ರಗತಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಾತ್ರ ಮುಖ್ಯವಾಗಿದೆ ಎಂದು ತಿಳಿಸಿದರು.
ಧರ್ಮಸ್ಥಳ ಸಂಘದ ತಾಲೂಕು ಯೋಜನಾಧಿಕಾರಿ ನಾರಾಯಣ ಮಾತನಾಡಿದರು. ಪುರಸಭೆ ಅಧ್ಯಕ್ಷ ವಸಂತ ಲಾಳಿ ಕಾರ್ಯಕ್ರಮ ಉದ್ಘಾಟಿಸಿದರು. ಮಾರುತಿ ಧರ್ಮಟ್ಟಿ, ಸಹದೇವ ಲಾಳಿ, ಪುರಸಭೆ ನಾಮ ನಿರ್ದೇಶಕ ಸದಸ್ಯ ಸಿದ್ಧರಾಮ ಅರಬಾವಿ, ಹನುಮಂತ ಸಣ್ಣಕ್ಕಿನವರ, ಹನುಮಂತ ಕುರಿ ಇತರರಿದ್ದರು. ಮೇಲ್ವಿಚಾರಕಿ ಸುಜಾತ ಗುಡಿಮನಿ ನಿರೂಪಿಸಿದರು.