ರಾಮದುರ್ಗ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಅಂಗವಾಗಿ ನಗರದ ತೇರ ಬಜಾರದಲ್ಲಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ೆ.10ರಂದು ಸಂಜೆ 5 ಗಂಟೆಗೆ ಏರ್ಪಡಿಸಲಾಗಿದೆ ಎಂದು ಕಾರ್ಯಕ್ರಮದ ಸ್ವಾಗತ ಸಮಿತಿಯ ಮುಖಂಡ ಮಲ್ಲಿಕಾರ್ಜುನ ಭಾವಿಕಟ್ಟಿ ಹೇಳಿದರು
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರ ಸೇರಿ ವಿವಿಧ ಗ್ರಾಮಗಳಲ್ಲಿ ಸುಮಾರು 6 ಕಾರ್ಯಕ್ರಮ ಆಯೋಜಿಸಲಾಗಿದ್ದು, ಯುವಕರದಲ್ಲಿ ಧರ್ಮ ಜಾಗತಿ ಮೂಡಿಸಿ, ಧರ್ಮ ಪ್ರಚಾರ ಮಾಡಿ, ಹಿಂದುತ್ವದ ಸಂಘಟನೆಗೆ ಒತ್ತು ನೀಡಲಾಗುತ್ತಿದೆ. ನಗರದಲ್ಲಿ ೆ.9ರಂದು ಸಂಜೆ 4 ಗಂಟೆಗೆ ಬೈಕ್ ರ‌್ಯಾಲಿ, ೆ.10ರಂದು ಮಧ್ಯಾಹ್ನ 2 ಗಂಟೆಗೆ ಶೋಭಾಯಾತ್ರೆ ನಡೆಯಲಿದೆ. ಸಂಜೆ 5 ಗಂಟೆಗೆ ಸಮಾಜೋತ್ಸವ ಕಾರ್ಯಕ್ರಮ ಜರುಗಲಿದೆ ಎಂದರು.
ವೈದ್ಯ ಪ್ರಕಾಶ ಆಪ್ಟೆ ಅಧ್ಯಕ್ಷತೆ, ತೊಂಡಿಕಟ್ಟಿ ಅವಧೂತ ಗಾಳೇಶ್ವರ ಮಠದ ಅಭಿನವ ವೆಂಕಟೇಶ ಮಹಾರಾಜರು ಸಾನಿಧ್ಯ ವಹಿಸುವರು. ಆರ್‌ಎಸ್‌ಎಸ್ ದಕ್ಷಿಣ ಮಧ್ಯಕ್ಷೇತ್ರ ಬೌದ್ಧಿಕ ಪ್ರಮುಖ ಶ್ರೀಧರ ಸ್ವಾಮಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ
ವಕ್ತಾರರಾಗಿ ಲಘು ಉದ್ಯೋಗ ಭಾರತಿ ಕಾರ್ಯಕಾರಿಣಿ ಸದಸ್ಯೆ ಡಾ.ಸುನಂದಾ ಕಳಕಣ್ಣವರ ಪಾಲ್ಗೊಳ್ಳಲಿದ್ದಾರೆ ಎಂದರು. ಸ್ವಾಗತ ಸಮಿತಿ ಉಪಾಧ್ಯಕ್ಷ ಶಂಕ್ರಣ್ಣ ಮುರುಡಿ, ಡಾ.ಬಸವರಾಜ ಮಾದನ್ನವರ, ವೆಂಕಟೇಶ ಹಿರೇರಡ್ಡಿ ಇತರರಿದ್ದರು.