ಬೆಂಕಿ ಕೆಣ್ಣಾಲಿಗೆಗೆ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು. 
ಬೆಳಗಾವಿ

ಮನೆಗಳಿಗೆ ಬೆಂಕಿ ಹೊತ್ತಿ ಅಪಾರ ಹಾನಿ

ಧರ್ಮರಾಜ ರಾಮನಗೌಡ ಪಾಟೀಲ
ಎಂ.ಕೆ.ಹುಬ್ಬಳ್ಳಿ: ಬೈಲಹೊಂಗಲ ತಾಲೂಕಿನ ಹೊಳಿಹೊಸೂರ ಗ್ರಾಮದಲ್ಲಿ ಮನೆಗಳಿಗೆ ಬೆಂಕಿ ಹೊತ್ತಿ ಅಪಾರ ಹಾನಿಯಾದ ಘಟನೆ ಮಂಗಳವಾರ ನಡೆದಿದೆ. ಓಮಣ್ಣ ಹಜೇರಿ ಅವರ ಮನೆಗೆ ಹೊತ್ತಿದ ಬೆಂಕಿ ಕ್ಷಣಾರ್ಧದಲ್ಲಿ ಪಕ್ಕದ ಶೇಖಪ್ಪ ಹಜೇರಿ, ಅರ್ಜುನ ಮೆಳವಂಕಿ, ಬಸಪ್ಪ ಮೆಳವಂಕಿ ಅವರ ಮನೆಗಳಿಗೂ ವ್ಯಾಪಿಸಿ, ಹಾನಿಯಾಗಿದೆ.
ಸ್ಥಳಕ್ಕೆ ಆಗಮಿಸಿದ ಬೈಲಹೊಂಗಲ ಮತ್ತು ಕಿತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿಯಲ್ಲಿ ಚಿನ್ನಾಭರಣ, ನಗದು, ಧವಸ- ಧಾನ್ಯ, ದಾಖಲಾತಿಗಳು ಮತ್ತು ಗೃಹೋಪಯೋಗಿ ವಸ್ತುಗಳು ಸುಟ್ಟಿವೆ. ಸ್ಥಳಕ್ಕೆ ಶಾಸಕ ಬಾಬಾಸಾಹೇಬ ಪಾಟೀಲ ಭೇಟಿ ನೀಟಿ ಪರಿಶೀಲಿಸಿ, ಸರ್ಕಾರದಿಂದ ಸೂಕ್ತ ಪರಿಹಾರ ಕಲ್ಪಿಸುವುದಾಗಿ ಸಂತ್ರಸ್ತರಿಗೆ ಭರವಸೆ ನೀಡಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.