ಬೆಳಗಾವಿ ನಗರದ ಗೃಹ ಕಚೇರಿಯಲ್ಲಿ ಗುರುವಾರ ಲಕ್ಷ್ಮೀ ಹೆಬ್ಬಾಳ್ಕರ ಕ್ಷೇತ್ರದ ಜನರೊಂದಿಗೆ ಸಭೆ ನಡೆಸಿದರು. ಅಧಿಕಾರಿಗಳಾದ ಮಲ್ಲಿಕಾರ್ಜುನ ಕಲಾದಗಿ, ಶಾಂತಪ್ಪ ಹಾದಿಮನಿ, ಹಾಲಸಿದ್ದಪ್ಪ ಸುಳನ್ನವರ, ಅಭಿಷೇಕ ಪಾಂಡೆ ಇತರರಿದ್ದರು. 
ಬೆಳಗಾವಿ

ಭಾರತ ಜೋಡೀ ಯುವ ಸಂಘ ಯೋಜನೆ ಅನುಷ್ಠಾನ

ವಿಜಯವಾಣಿ ಸುದ್ದಿಜಾಲ ಬೆಳಗಾವಿ
ರಾಜ್ಯದಲ್ಲಿ ಯುವಜನರ ನಾಯಕತ್ವ ಗುಣ, ಕ್ರೀಡಾ ಪ್ರತಿಭೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೊಳಿಸಿರುವ ಭಾರತ ಜೋಡೋ ಯುವ ಸಂಘ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಸೂಚಿಸಿದರು.
ನಗರದ ಗೃಹಕಚೇರಿಯಲ್ಲಿ ಗುರುವಾರ ಅಧಿಕಾರಿಗಳ ನಡೆದ ಸಭೆಯಲ್ಲಿ ಮಾತನಾಡಿ,ರಾಜ್ಯಾದ್ಯಂತ ಸ್ಥಳೀಯ ಜನಸಂಖ್ಯೆಯ ಆಧಾರದ ಮೇಲೆ ಒಟ್ಟು 10,000 ಯುವ ಸಂಘಗಳನ್ನು ರಚಿಸಲಾಗುತ್ತಿದ್ದು, ಪ್ರತಿ ಸಂಘಕ್ಕೆ ವಾರ್ಷಿಕ 10 ಲಕ್ಷ ರೂ. ಅನುದಾನ ಒದಗಿಸುವ ಉದ್ದೇಶ ಹೊಂದಲಾಗಿದೆ. ಈ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಜನರನ್ನು ಸಂಘಟಿಸಿ, ಅವರಲ್ಲಿ ನಾಯಕತ್ವದ ಗುಣ ಬೆಳೆಸುವುದರ ಜೊತೆಗೆ ಕ್ರೀಡೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಸರ್ಕಾರ ಮುಂದಾಗಿದೆ ಎಂದರು.
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಿಂಡಲಗಾ, ಬೆನಕನಹಳ್ಳಿ ಹಾಗೂ ಹಿರೇಬಾಗೇವಾಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಯುವ ಸಂಘಗಳ ಸ್ಥಾಪನೆ, ಯೋಜನೆಯ ಅನುಷ್ಠಾನದಲ್ಲಿ ಪಾರದರ್ಶಕತೆ ಕಾಡಿಕೊಳ್ಳಬೇಕು. ಈ ವಿಷಯ ನಿರ್ಲಕ್ಷೃ ಮಾಡಿದರೆ ಕ್ರಮ ಎದುರಿಸಬೇಕಾಗಿದೆ ಎಂದು ತಿಳಿಸಿದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಹಿಂಡಲಗಾ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಾಂತಪ್ಪ ಹಾದಿಮನಿ, ಬೆನಕನಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹಾಲಸಿದ್ದಪ್ಪ ಸುಳನ್ನವರ,ಹಿರೇಬಾಗೇವಾಡಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಭಿಷೇಕ ಪಾಂಡೆ ಇತರರಿದ್ದರು.
.............
ಬಾಕ್ಸ್
ಸಾರ್ವಜನಿಕರ ಅಹವಾಲು ಆಲಿಕೆ
ಬೆಳಗಾವಿ ನಗರದ ಗೃಹಕಚೇರಿಯಲ್ಲಿ ಗುರುವಾರ ಸಾರ್ವಜನಿ ಅಹವಾಲು ಆಲಿಸಿದ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಜನರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಪರಿಹರಿಸಲು ಅಧಿಕಾರಿಗಳು ಪ್ರಯತ್ನಿಸಬೇಕು. ಗ್ರಾಪಂ ಮಟ್ಟದಲ್ಲಿ ಪರಿಹರಿಸಬೇಕಾದ ಸಮಸ್ಯೆಗಳನ್ನು ಸಚಿವರು, ಜಿಲ್ಲಾ ಮಟ್ಟದ ಅಧಿಕಾರಿಗಳ ವರೆಗೆ ತೆಗೆದುಕೊಂಡು ಬರಲು ಅವಕಾಶ ನೀಡಿದರೆ ಸಂಬಂಧಿಸಿದವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
............