ನಂದಿಕುರಳಿ ಗ್ರಾಮದ ಪಂಚಲಿಂಗೇಶ್ವರ ಮಠದಲ್ಲಿ ೩೯ನೇ ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಮಹೇಶಾನಂದ ಸ್ವಾಮೀಜಿ ಮಾತನಾಡಿದರು. ವೀರಭದ್ರೇಶ್ವರ ಸ್ವಾಮೀಜಿ, ಹಾರಿಕಾ ಮಂಜುನಾಥ, ವಿಠ್ಠಲಜಿ ಮಾಳಿ, ಸಿದ್ದಲಿಂಗ ಸ್ವಾಮೀಜಿ, ಶಂಕರ ಸ್ವಾಮೀಜಿ ಇದ್ದರು. 
ಬೆಳಗಾವಿ

ಮಕ್ಕಳಲ್ಲಿ ದೇಶಪ್ರೇಮ ಬೆಳೆಸಿ

ರಾಯಬಾಗ: ಮಠ ಮತ್ತು ಸಂತರಿAದ ಹಿಂದೂ ಧರ್ಮ, ಸಂಸ್ಕೃತಿ ಉಳಿದುಕೊಂಡಿದೆ ಎಂದು ಹಂಚಿನಾಳ ಭಕ್ತಿಯೋಗಾಶ್ರಮದ ಮಹೇಶಾನಂದ ಸ್ವಾಮೀಜಿ ಹೇಳಿದರು.
ತಾಲೂಕಿನ ನಂದಿಕುರಳಿ ಗ್ರಾಮದ ಪಂಚಲಿಂಗೇಶ್ವರ ಮಠದಲ್ಲಿ ೩೯ನೇ ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಿಗೆ ಒಳ್ಳೆಯ ಶಿಕ್ಷಣ, ಜ್ಞಾನ ಜತೆಗೆ ಸಂಸ್ಕಾರ, ಸಂಸ್ಕೃತಿ ನೀಡಿ, ಉತ್ತಮ ನಾಗರಿಕರನ್ನಾಗಿ ರೂಪಿಸಿ, ದೇಶಪ್ರೇಮ ಬೆಳೆಸಬೇಕು ಎಂದರು.
ವಾಗ್ಮಿ ಹಾರಿಕಾ ಮಂಜುನಾಥ ಮಾತನಾಡಿ, ನಾವೆಲ್ಲ ಒಂದು ಎಂಬ ಭಾವನೆ ಮೂಡಿದಾಗ ಸನಾತನ ಹಿಂದೂ ಧರ್ಮ ಉಳಿಯಲು ಸಾಧ್ಯ. ಮಕ್ಕಳಲ್ಲಿ ಧರ್ಮ, ಪರಂಪರೆ, ಇತಿಹಾಸದ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದರು.
ಚಿಕ್ಕೋಡಿ ಸಂಪಾದನಾ ಚರಮೂರ್ತಿಮಠದ ಸಂಪಾದನಾ ಸ್ವಾಮೀಜಿ, ಅಥಣಿ ಕಾಡಸಿದ್ಧೇಶ್ವರ ಮಠದ ಡಾ.ಕಾಡಯ್ಯ ಸ್ವಾಮೀಜಿ ಮಾತನಾಡಿದರು.
ಪಂಚಲಿಂಗೇಶ್ವರ ಮಠದ ವೀರಭದ್ರೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಜೈನಾಪುರದ ಸಿದ್ದಲಿಂಗ ಸ್ವಾಮೀಜಿ, ವಿಜಯಪುರದ ಶಂಕರ ಸ್ವಾಮೀಜಿ, ನರಸಿಂಹರಾಜ ಸ್ವಾಮೀಜಿ, ವಿಶ್ವ ಹಿಂದೂ ಪರಿಷತ್ ಪ್ರಾಂತ ಗೋರಕ್ಷಾ ಪ್ರಮುಖ ವಿಠ್ಠಲಜಿ ಮಾಳಿ, ವಕೀಲರ ಸಂಘದ ಅಧ್ಯಕ್ಷ ಕೆ.ಆರ್.ಕೋಟಿವಾಲೆ, ರಘು ಮಾಳಿ, ಅಮಿತ ಜಾಧವ, ಸಂಗಣ್ಣ ದತ್ತವಾಡೆ, ಕೇದಾರಿ ಮಾಳಿ ಇತರರಿದ್ದರು.