ಬೆಳಗಾವಿಯಲ್ಲಿ ಭಾನುವಾರ ಸಾರ್ವಜನಿಕರ ಅಹವಾಲು ಆಲಿಸಿದ ಲಕ್ಷ್ಮೀ ಹೆಬ್ಬಾಳ್ಕರ್, ಸ್ಥಳದಲ್ಲೇ ಸಂಬಂಧಿತ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆಗಳನ್ನು ಪರಿಹರಿಸಿದರು. ಚನ್ನರಾಜ ಹಟ್ಟಿಹೊಳಿ ಇದ್ದಾರೆ.  
ಬೆಳಗಾವಿ

ಸಾರ್ವಜನಿಕರ ಅಹವಾಲು ಆಲಿಸಿದ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಭಾನುವಾರ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳು ಮತ್ತು ಸಮಸ್ಯೆಗಳನ್ನು ಆಲಿಸಿದರು.
ವಿವಿಧ ಗ್ರಾಮಗಳು ಹಾಗೂ ನಗರದ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಜನರು ತಮ್ಮ ವೈಯಕ್ತಿಕ, ಸಾಮಾಜಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ಗಮನಕ್ಕೆ ತಂದರು. ಜನರು ಸಲ್ಲಿಸಿದ ಅಹವಾಲುಗಳನ್ನು ಆಲಿಸಿದ ಅವರು, ಕೇವಲ ಸಾಂತ್ವನವಷ್ಟೇ ಹೇಳದೆ ಹಲವು ವಿಷಯಗಳಿಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ದೂರವಾಣಿ ಮೂಲಕ ಮಾತನಾಡಿ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸರ್ಕಾರಿ ಯೋಜನೆಗಳ ಅನುಷ್ಠಾನ, ಮೂಲಸೌಕರ್ಯ ಅಭಿವೃದ್ಧಿ, ಕಂದಾಯ ಇಲಾಖೆ, ಪಿಂಚಣಿ, ಕುಡಿಯುವ ನೀರು, ರಸ್ತೆ, ಆರೋಗ್ಯ ಹಾಗೂ ಇತರೆ ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳ ಕುರಿತು ಜನರು ಮನವಿ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಇದ್ದರು.