ನಿಪ್ಪಾಣಿಯಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಶಾಸಕಿ ಶಶಿಕಲಾ ಜೊಲ್ಲೆ, ಸುರೇಶ ಮುಂಜೆ, ಬಿ.ಎಸ್.ತಳವಾರ, ಗಣಪತಿ ಪಾಟೀಲ ಇತರರಿದ್ದರು. 
ಬೆಳಗಾವಿ

ಸಂವಿಧಾನದ ಮೌಲ್ಯ ಅಳವಡಿಕೆಯಾಗಲಿ

ನಿಪ್ಪಾಣಿ: ವಿಶ್ವಕ್ಕೆ ಮಾದರಿಯಾದ ನಮ್ಮ ಸಂವಿಧಾನವನ್ನು ಗೌರವಿಸುವ ಜತೆಗೆ ಅದರ ರಕ್ಷಣೆಗೆ ಸದಾ ಬದ್ಧರಾಗೋಣ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.
ಸ್ಥಳೀಯ ಮುನ್ಸಿಪಲ್ ಪ್ರೌಢಶಾಲೆ ಮೈದಾನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದಲ್ಲಿ ಮಾತನಾಡಿ, ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಒಟ್ಟಾಗಿ ದೇಶದ ಏಕತೆ, ಸಮೃದ್ಧಿ ಮತ್ತು ಅಭಿವೃದ್ಧಿಗಾಗಿ ಶ್ರಮಿಸೋಣ. ಸದಢ ದೇಶ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ ಎಂದು ಹೇಳಿದರು.
ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ತಹಸೀಲ್ದಾರ್ ಸುರೇಶ ಮುಂಜೆ, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವಿ ನಾಯಿಕ, ಪೌರಾಯುಕ್ತ ಗಣಪತಿ ಪಾಟೀಲ, ಸಿಪಿಐ ಬಿ.ಎಸ್.ತಳವಾರ, ಸಿಡಿಪಿಒ ಸುಮಿತ್ರಾ ಜಗಡೆ ಇತರರಿದ್ದರು.