ಮೂಡಲಗಿಯ ಶ್ರೀ ಶ್ರೀಪಾದಭೋದ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ನಶೆ ಮುಕ್ತ ವಿಕಸಿತ ಭಾರತ ಕಾರ್ಯಕ್ರಮದಲ್ಲಿ ಸಂಗ್ರಾಮ ಸಾವಂತ ಪ್ರತಿಜ್ಞಾವಿಧಿ ಬೋಧಿಸಿದರು. ಸರ್ವೋತ್ತಮ ಜಾರಕಿಹೊಳಿ, ಬಾಲಶೇಖರ ಬಂದಿ ಇತರರಿದ್ದರು. 
ಬೆಳಗಾವಿ

ಯುವಕರು ನಿಸ್ವಾರ್ಥ ಸೇವೆ ಸಲ್ಲಿಸಲಿ

ಅರ್ಚನಾ ಜಾಧವ

ಪ್ರಮುಖ ಮುಖ್ಯಾಂಶಗಳು

  • ಸರ್ವೋತ್ತಮ ಆಶಯ
  • ವಿಜೇತರಿಗೆ ಬಹುಮಾನ ವಿತರಣೆ
ಮೂಡಲಗಿ:

ರಾಷ್ಟ್ರದ ಅಭಿವೃದ್ಧಿ ಹಾಗೂ ನಶೆಮುಕ್ತ ಭಾರತ ನಿರ್ಮಾಣಕ್ಕೆ ಪ್ರತಿಯೊಬ್ಬ ಯುವಕರು ನಿಸ್ವಾರ್ಥ ಸೇವೆ ಸಲ್ಲಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ತಾಲೂಕು ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು.

ಶ್ರೀ ಶ್ರೀಪಾದಭೋದ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಭಾಂಗಣದಲ್ಲಿ ಮೈ ಭಾರತ ಕೇಂದ್ರ, ಹಳ್ಳೂರಿನ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ, ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಎನ್‌ಎಸ್‌ಎಸ್ ಘಟಕದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಶಾ ಮುಕ್ತ ವಿಕಸಿತ ಭಾರತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿವಿಧ ಜನಜಾಗೃತಿ ಕೈಗೊಳ್ಳುತ್ತಿದ್ದು, ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಸಾಹಿತಿ ಬಾಲಶೇಖರ ಬಂದಿ, ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹಾಗೂ ಪ್ರಾಚಾರ್ಯ ಮಹೇಶ ಕಂಬಾರ ಮಾತನಾಡಿದರು. ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಘಟಕಗಳ ಸಂಯೋಜಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.