ನಿಪ್ಪಾಣಿ ವಿಎಸ್‌ಎಂ ಜಿ.ಐ.ಬಾಗೇವಾಡಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕೃಷಿ ಉತ್ಸವವನ್ನು ಚಂದ್ರಕಾಂತ ಕೋಠಿವಾಲೆ ಉದ್ಘಾಟಿಸಿದರು. ಆನಂದ ಗಿಂಡೆ, ಪಪ್ಪು ಪಾಟೀಲ ಇತರರಿದ್ದರು.
ನಿಪ್ಪಾಣಿ: ಪ್ರತಿಯೊಬ್ಬ ವಿದ್ಯಾರ್ಥಿಯು ಒಂದೊಂದು ಕ್ಷೇತ್ರದಲ್ಲಿ ಪರಿಣತರಾಗಿರುತ್ತಾರೆ. ಎಲ್ಲ ಕ್ಷೇತ್ರದಲ್ಲೂ ಮುಂದಾಗಬೇಕೆನ್ನುವುದು ನಮ್ಮ ಆಶಯ ಎಂದು ಸ್ಥಳೀಯ ವಿದ್ಯಾ ಸಂವರ್ಧಕ ಮಂಡಳ ಅಧ್ಯಕ್ಷ ಚಂದ್ರಕಾಂತ ಕೋಠಿವಾಲೆ ಹೇಳಿದರು.
ಪಟ್ಟಣದ ವಿಎಸ್‌ಎಂ ಜಿ.ಐ.ಬಾಗೇವಾಡಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯ (ಪ್ರೌಢಶಾಲಾ ವಿಭಾಗ)ದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕೃಷಿ ಉತ್ಸವ ಉದ್ಘಾಟಿಸಿ ಮಾತನಾಡಿ, ಕೃಷಿ ಉತ್ಪನ್ನ ಬೆಳೆದು ಅವುಗಳನ್ನು ಮಾರುಕಟ್ಟೆಗೆ ಸಾಗಿಸುವವರೆಗೆ ರೈತರು ಎದುರಿಸುವ ಕಷ್ಟಗಳನ್ನು ಅರಿಯಬೇಕು. ಕೃಷಿ ಕುರಿತು ಆಸಕ್ತಿ ಬೆಳೆಸಿಕೊಳ್ಳಬೇಕು. ಬೆಳೆದ ಉತ್ಪನ್ನ ಸಂಸ್ಕರಣೆ ಮಾಡಿ ಬ್ರಾೃಂಡಿಂಗ್‌ದೊಂದಿಗೆ ಕೃಷಿ ವ್ಯವಹಾರದಲ್ಲಿ ತೊಡಗಿಸಿಕೊಳ್ಳಬೇಕು ಎಂಬುದು ಇಂದಿನ ಕೃಷಿ ಉತ್ಸವದ ಆಶಯವಾಗಿದೆ ಎಂದರು.
ಉಪಾಧ್ಯಕ್ಷ ಪಪ್ಪು ಪಾಟೀಲ, ಕಾರ್ಯದರ್ಶಿ ಸಮೀರ ಬಾಗೇವಾಡಿ, ನಿರ್ದೇಶಕ ಹರಿಶ್ಚಂದ್ರ ಶಾಂಡಗೆ, ಭರತ ಕುರಬೆಟ್ಟಿ, ಸಂಜಯ ಮೊಳವಾಡೆ, ರಾವಸಾಹೇಬ ಪಾಟೀಲ, ಸಚಿನ ಹಾಲಪ್ಪನವರ, ಪ್ರವೀಣ ಪಾಟೀಲ, ಅವಿನಾಶ ಪಾಟೀಲ, ಶೇಖರ ಪಾಟೀಲ, ಗಣೇಶ ಖಡೇದ, ರುದ್ರಕುಮಾರ ಕೋಠಿವಾಲೆ, ಸಂಜಯ ಶಿಂತ್ರೆ ಇತರರಿದ್ದರು.