ಸಾಲಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಶಾಸಕ ಅಶೋಕ ಪಟ್ಟಣ ಮಾತನಾಡಿದರು. ಶಶಿಕಾಂತ ಗುರೂಜಿ, ಚೂನಪ್ಪ ಪೂಜಾರಿ, ಮಲ್ಲಣ್ಣ ಯಾದವಾಡ ಜಗದೀಶ ದೇವರಡ್ಡಿ, ಶಿವಾನಂದ ದೊಡವಾಡ ಇತರರಿದ್ದರು. 
ಬೆಳಗಾವಿ

ಏತ ನೀರಾವರಿ ಕಾಮಗಾರಿ ಶೀಘ್ರ ಮುಕ್ತಾಯ

ರಾಘವೇಂದ್ರಗೌಡ ಭೀ ಪಾಟೀಲ್
ರಾಮದುರ್ಗ:
ಶಾಸಕ ಅಶೋಕ ಪಟ್ಟಣ ಮಾತನಾಡಿ, ಸ್ವಾಧೀನಪಡಿಸಿಕೊಂಡ ರೈತ ಜಮೀನುಗಳಿಗೆ ಪರಿಹಾರ ನೀಡಲು ಹಣವಿದೆ. ಮಾರ್ಚ್ 2027ರ ಒಳಗಾಗಿ ಸಾಲಾಪುರ ಬಸವೇಶ್ವರ ಏತ ನೀರಾವರಿ ಹಾಗೂ ಡಿಸೆಂಬರ್ 2027 ಒಳಗಾಗಿ ವೀರಭದ್ರೇಶ್ವರ ಏತ ನೀರಾವರಿ ಕಾಮಗಾರಿ ಪೂರ್ಣಗೊಳಿಸಿ, ರೈತರ ಜಮೀನುಗಳಿಗೆ ನೀರು ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ರೈತ ಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಶಶಿಕಾಂತ ಗೂರೂಜಿ, ರೈತ ಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಣ್ಣ ಯಾದವಾಡ, ರೈತ ಸಂಘದ ತಾಲೂಕಾಧ್ಯಕ್ಷ ಜಗದೀಶ ದೇವರಡ್ಡಿ, ಶಿವಾನಂದ ದೊಡವಾಡ, ಮಾರುತಿ ಕೊಪ್ಪದ, ವಿಜುಗೌಡ ಪಾಟೀಲ, ಶಂಕರಗೌಡ ಪಾಟೀಲ,
ನಿಂಗನಗೌಡ ಪಾಟೀಲ, ಮಾರುತಿ ಕುಂಬಾರ, ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ, ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಲಕ್ಷ್ಮಣ ನಾಯಕ, ಅಧೀಕ್ಷಕ ಅಭಿಯಂತರ ಸುಬಾಸ ನಾಯಕ, ಎಇಇ ಶ್ರೀನಿವಾಸ ಅರಿಸಿಣಗೋಡಿ, ರುದ್ರಮುನಿ ವಿವಿಧ ರೈತಪರ ಸಂಘಟನೆಗಳ ಪದಾಧಿಕಾರಿಗಳು, ರೈತ ಮುಖಂಡರು ಇತರರಿದ್ದರು.