Lorry overturns after driver loses control
ಎಂ.ಕೆ.ಹುಬ್ಬಳ್ಳಿ: ಸಮೀಪದ ದಾಸ್ತಿಕೊಪ್ಪ ಗ್ರಾಮದ ಬಳಿಯ ಪುಣೆ&ಬೆಂಗಳೂರು ರಾಷ್ಟ್ರೀಯ ಹೆದ್ದಾರಿ&4ರಲ್ಲಿ ಕೇರಳ ರಾಜ್ಯದಿಂದ ಮುಂಬೆಗೆ ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಿಂದ ಪಕ್ಕದ ಸರ್ವಿಸ್ ರಸ್ತೆಗೆ ಭಾನುವಾರ ಪಲ್ಟಿಯಾಗಿದೆ. ಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಾಲಕ ಮತ್ತು ಕ್ಲಿನರ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಸುಮಾರು 10 ಅಡಿಗೂ ಅಧಿಕ ಎತ್ತರದ ಹೆದ್ದಾರಿಯಿಂದ ಕೆಳಗಿನ ಸರ್ವಿಸ್ ರಸ್ತೆಗೆ ಉರುಳಿದೆ. ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.