ಬೆಳಗಾವಿ ತಾಲೂಕಿನ ಕಂಗ್ರಾಳಿ ಬಿ.ಕೆ.ಗ್ರಾಮದಲ್ಲಿ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಚನ್ನರಾಜ ಹಟ್ಟಿಹೊಳಿ, ಮೃಣಾಲ್ ಹೆಬ್ಬಾಳ್ಕರ್ ಕುಟುಂಬ ಸದಸ್ಯರು ಭಾಗವಹಿಸಿದ್ದರು.
ಬೆಳಗಾವಿ: ಗ್ರಾಮೀಣ ಭಾಗದಲ್ಲಿ ಧಾರ್ಮಿಕ ಕಾರ್ಯ, ಜಾತ್ರೆಗಳು, ಅಭಿವೃದ್ಧಿ ಕೆಲಸಗಳು ನಿರಂತರವಾಗಿ ನಡೆಯುತ್ತಿರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ತಾಲೂಕಿನ ತಾರಿಹಾಳ ಗ್ರಾಮದ ಗ್ರಾಮದೇವಿ ಜಾತ್ರಾ ಮಹೋತ್ಸವದಲ್ಲಿ ದೇವಿಗೆ ಪೂಜೆ ಸಲ್ಲಿಸಿ ಮಾತನಾಡಿ, ದಶಕದ ನಂತರ ನಡೆಯುತ್ತಿರುವ ಜಾತ್ರೆ ಹಬ್ಬದ ವಾತಾವರಣ ನಿರ್ಮಿಸಿದ್ದು, ಪ್ರತಿ ಮನೆಯಲ್ಲೂ ಸಂಭ್ರಮ ಮತ್ತು ಉತ್ಸಾಹ ತುಂಬಿಸಿದೆ ಎಂದರು.
ಕಂಗ್ರಾಳಿ ಬಿ.ಕೆ.ಗ್ರಾಮದಲ್ಲಿ 43 ವರ್ಷದ ನಂತರ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಬೆಳಗ್ಗೆ ವಿಶೇಷ ಪೂಜೆ, ಹೋಮ-ಹವನ ಹಾಗೂ ಮಂತ್ರಾಕ್ಷತೆಯನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ, ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಕುಟುಂಬ ಸದಸ್ಯರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಚಾಲನೆ: ಬೆಳಗಾವಿ ತಾಲೂಕಿನ ಬಡಸ ಗ್ರಾಮದಲ್ಲಿ ಮಂಗಳವಾರ 4.50 ಕೋಟಿ ರೂ.ವೆಚ್ಚದ
ಸೇತುವೆ ಸಹಿತ ಬಾಂದಾರು ಕಾಮಗಾರಿಗೆ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಚಾಲನೆ ನೀಡಿದರು. ಕಾಡಾ ಅಧ್ಯಕ್ಷ ಯುವರಾಜ ಕದಂ, ಮನೋಹರ ಬೆಳಗಾಂವ್ಕರ ಇತರರಿದ್ದರು.