ರಾಯಬಾಗ ತಾಲೂಕಿನ ಬಾವನ ಸೌಂದತ್ತಿಯ ಬಾಜೀರಾವ ಮಗದುಮ್ಮ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಕ್ರೀಡಾಕೂಟಕ್ಕೆ ಗಣ್ಯರು ಚಾಲನೆ ನೀಡಿದರು. ಈರಗೌಡ ಪಾಟೀಲ, ಎ.ಟಿ.ಕೂಗೆ, ಅಜಿತ ಕಾಮಗೌಡ, ಅರಿಹಂತ ಕಾಮಗೌಡ ಇತರರಿದ್ದರು.
ರಾಯಬಾಗ: ಸೋಲು-ಗೆಲುವಿಗಿಂತ ಸ್ಪರ್ಧಾ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕೆಂದು ಆದರ್ಶ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಈರಗೌಡ ಪಾಟೀಲ ಹೇಳಿದರು.
ತಾಲೂಕಿನ ಬಾವನ ಸೌಂದತ್ತಿಯ ಬಾಜೀರಾವ ಮಗದುಮ್ಮ ಪ್ರೌಢಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಾವನ ಸೌಂದತ್ತಿ ವಲಯ ಮಟ್ಟದ ಇಲಾಖೆ ಕ್ರೀಡಾಕೂಟದಲ್ಲಿ ಮಾತನಾಡಿದರು.
ಸಂಸ್ಥೆ ಕಾರ್ಯದರ್ಶಿ ಎ.ಟಿ.ಕೂಗೆ, ಸದಸ್ಯರಾದ ಅಜಿತ ಕಾಮಗೌಡ, ಅರಿಹಂತ ಕಾಮಗೌಡ, ಮುಖ್ಯಶಿಕ್ಷಕ ಅರುಣ ಸಲಗರೆ, ರಾಜಕುಮಾರ ಲೋಕನ್ನವರ, ಶ್ರೀಶೈಲ ತಾಂವಶಿ ಇತರರಿದ್ದರು.