ಯರಗಟ್ಟಿಯಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಚಿವ ಸತೀಶ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು. ವಿಶ್ವಾಸ ವೈದ್ಯ, ಚನ್ನರಾಜ ಹಟ್ಟಿಹೊಳಿ, ನೀಲಕಂಠ ಸಿದ್ಧಬಸನ್ನವರ, ಮಹೇಶ ಭಜಂತ್ರಿ, ರವೀಂದ್ರ ಯಲಿಗಾರ ಇತರರಿದ್ದರು. 
ಬೆಳಗಾವಿ

ಜನರ ಅನುಕೂಲಕ್ಕೆ ಪ್ರಜಾಸೌಧ

ಯರಗಟ್ಟಿ:
ಎಪಿಎಂಸಿ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಾಲೂಕು ಪಂಚಾಯಿತಿ ಕಟ್ಟಡ ಉದ್ಘಾಟನೆ ಮತ್ತು ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಅನಗತ್ಯ ಅಲೆದಾಟ ತಪ್ಪಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಂದೇ ಸೂರಿನಡಿ ವಿವಿಧ ಇಲಾಖೆ ಕಚೇರಿ ಸ್ಥಾಪಿಸುವ ಸದುದ್ದೇಶ ಹೊಂದಿದೆ. ಈ ನಿಟ್ಟಿನಲ್ಲಿ ಪ್ರಜಾಸೌಧ ನಿರ್ಮಿಸುವಲ್ಲಿ ಶಾಸಕ ವಿಶ್ವಾಸ ವೈದ್ಯ ಹೆಚ್ಚಿನ ಮುತುವರ್ಜಿ ವಹಿಸಿದ್ದಾರೆ ಎಂದರು.
ಶಾಸಕ ವಿಶ್ವಾಸ ವೈದ್ಯ ಮಾತನಾಡಿ, ಮುಂಬರುವ ದಿನಗಳಲ್ಲಿ ಸವದತ್ತಿ ಮತ್ತು ಯರಗಟ್ಟಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಸಚಿವ ಸತೀಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಶಾಸಕ ವಿಶ್ವಾಸ ವೈದ್ಯ ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳಿಗೆ ನಿರಂತರ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ತಹಸೀಲ್ದಾರ್‌ರಾದ ಎಂ.ವಿ.ಗುಂಡಪ್ಪಗೋಳ, ಮಲ್ಲಿಕಾರ್ಜುನ ಹೆಗ್ಗನ್ನವರ, ತಾಪಂ ಇಒ ಆನಂದ ಬಡಕುಂದ್ರಿ, ಸಿಡಿಪಿಒ ಅಮೃತ ಸಾಣಿಕೊಪ್ಪ, ಬಿಇಒ ಎ.ಎ.ಖಾಜಿ, ಮಹೇಶ ಭಜಂತ್ರಿ, ರವೀಂದ್ರ ಯಲಿಗಾರ, ನೀಲಕಂಠ ಸಿದ್ಧಬಸನ್ನವರ, ಮಲಿಕ್ ಭಾಗವಾನ, ಸಿ.ಪಿ. ಬಾಳಿ, ಕೀರಪ್ಪ ಹದ್ದನ್ನವರ, ಪುಂಡಲೀಕ ಮೇಟಿ, ಪ್ರಕಾಶ ವಾಲಿ, ಬಂಗಾರೆಪ್ಪ ಹರಳಿ, ನಿಖಿಲ್ ಪಾಟೀಲ, ಗೋಪಾಲ ದಳವಾಯಿ, ಶಂಕರ ಇಟ್ನಾಳ, ಸಂತೋಷ ಹಾದಿಮನಿ, ಭೀಮಶಿ ದಳವಾಯಿ, ವಿಠ್ಠಲ ದೇವರಡ್ಡಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.