ಅಕ್ಕಿಸಾಗರ ಗ್ರಾಮದಲ್ಲಿ ನೆಲಮಟ್ಟದ ಜಲ ಸಂಗ್ರಹಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಭೂಮಿಪೂಜೆ ನೆರವೇರಿಸಿದರು. ಅಶೋಕ ಕುಡಚಿ, ಶಂಕರ ಇಟ್ನಾಳ, ನೀಲಕಂಠ ಶಿದಬಸನ್ನವರ, ಪ್ರೇಮ ರಾಠೋಡ ಇತರರಿದ್ದರು. 
ಬೆಳಗಾವಿ

ಕ್ಷೇತ್ರದಲ್ಲಿ ಸೌಕರ್ಯ ಕಲ್ಪಿಸಲು ಆದ್ಯತೆ

ಅರ್ಚನಾ ಜಾಧವ
ಮುಗಳಿಹಾಳ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮೊದಲ ಆದ್ಯತೆ ಜತೆಗೆ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೀರು, ರಸ್ತೆ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಸಮೀಪದ ಅಕ್ಕಿಸಾಗರ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿಪಂ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಸವದತ್ತಿ ಉಪ ವಿಭಾಗ ಸಿಎಂಐಡಿಪಿ ಯೋಜನೆಯಡಿ 20 ಲಕ್ಷ ರೂ. ವೆಚ್ಚದಲ್ಲಿ ನೆಲಮಟ್ಟದ ಜಲ ಸಂಗ್ರಹಾಲಯ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮದಲ್ಲಿ ಕುಡಿಯುವ ನೀರಿನ ಸಂಗ್ರಹಣೆ ಮತ್ತು ಸರಬರಾಜು ವ್ಯವಸ್ಥೆ ಸುಧಾರಣೆಗೆ ಈ ಯೋಜನೆ ಸಹಕಾರಿಯಾಗಲಿದೆ. ಜಲ ಸಂಗ್ರಹಾಲಯ ನಿರ್ಮಾಣದಿಂದ ಶುದ್ಧ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದು ತಿಳಿಸಿದರು.
ಪಿಕೆಪಿಎಸ್ ಅಧ್ಯಕ್ಷ ಅಶೋಕ ಕುಡಚಿ ಮಾತನಾಡಿದರು. ಬೆಮುಲ್ ನಿರ್ದೇಶಕ ಶಂಕರ ಇಟ್ನಾಳ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶಿದಬಸನ್ನವರ, ಎಇಇ ಪ್ರೇಮ ರಾಠೋಡ, ಪಿಡಿಒ ಜಯಗೌಡ ಪಾಟೀಲ, ಎಪಿಎಂಸಿ ಸದಸ್ಯರಾದ ಲಕ್ಷ್ಮಣ ದಳವಾಯಿ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಗೋಪಾಲ ದಳವಾಯಿ, ಶಿವಾನಂದ ತಪಸಿ, ಲಕ್ಕಪ್ಪ ಮರಕುಂಬಿ, ಪುಂಡಲೀಕ ಕೊಟೂರ, ಕೃಷ್ಣಾ ಐದುಡ್ಡಿ ಇತರರಿದ್ದರು.