ಮೊಹಮ್ಮದ ರೋಷನ್  
ಬೆಳಗಾವಿ

ನಿಷೇಧಾಜ್ಞೆ ಜಾರಿ

ಡಿ.ವಿ. ಕಮ್ಮಾರ
ಬೆಳಗಾವಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾ.18ರಿಂದ ಏ.2ರವರೆಗೆ ಚಿಕ್ಕೋಡಿಯ 131 ಹಾಗೂ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 104 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಈ ಒಟ್ಟು 235 ಪರೀಕ್ಷಾ ಕೇಂದ್ರಗ ಸುತ್ತ ಪರೀಕ್ಷೆ ಅವಧಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ ಅನ್ವಯ ಸುತ್ತಮುತ್ತ 200ಮೀ. ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.