ಸಿಇಟಿ ಪರೀಕ್ಷೆ ವೇಳೆ ಜನಿವಾರ ಕತ್ತರಿಸಿದ ಪ್ರಕರಣವನ್ನು ಎಸ್ಐಟಿ ತನಿಖೆಗೊಳಪಡಿಸಲು ಆಗ್ರಹಿಸಿ ಬೆಳಗಾವಿಯಲ್ಲಿ ಗುರುವಾರ ಪ್ರತಿಭಟಿಸಲಾಯಿತು. ಜಯತೀರ್ಥ ಸವದತ್ತಿ, ಭೀಮಸೇನ ಮಿರ್ಜಿ, ಅರವಿಂದ ದೇಶಪಾಂಡೆ, ಗುರುರಾಜ ಹಲಗತ್ತಿ ಇತರರಿದ್ದರು.
ಬೆಳಗಾವಿ: ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜ್ ಹಾಗೂ ಚಿಕ್ಕಬಳ್ಳಾಪುರದ ನಾಗಾರ್ಜುನ ಕಾಲೇಜಿನ ಸಿಇಟಿ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಪ್ರಕರಣವನ್ನು ಎಸ್ಐಟಿ ತನಿಖೆಗೊಳಪಡಿಸಲು ಆಗ್ರಹಿಸಿ ನಗರದಲ್ಲಿ ಗುರುವಾರ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂದ ಜಿಲ್ಲಾ ಟಕದಿಂದ ಪ್ರತಿಭಟಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ಸಮುದಾಯದವರು, ಎರಡೂ ಕಾಲೇಜುಗಳಲ್ಲಿ ಉದ್ದೇಶಪೂರ್ವಕವಾಗಿಯೇ ಜನಿವಾರ ತೆಗೆಯಿಸಿದ್ದು, ಸಮಗ್ರ ತನಿಖೆ ಮಾಡಬೇಕು ಎಂದು ಮನವಿ ಮಾಡಿದರು.
ಟನೆಗೆ ಕಾರಣರಾದ ಪ್ರಾಂಶುಪಾಲರು, ಪರೀಕ್ಷಾ ಮೇಲ್ವಿಚಾರಕರು, ಭದ್ರತಾ ಸಿಬ್ಬಂದಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು, ಸಿಇಟಿ ಟಕದ ಆಯುಕ್ತರನ್ನು ಅಮಾನತು ಮಾಡಬೇಕು. ಜನಿವಾರ ಕತ್ತರಿಸಿದ್ದರಿಂದ ತೊಂದರೆಗೀಡಾಗಿರುವ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧ್ಯಕ್ಷ ಜಯತೀರ್ಥ ಸವದತ್ತಿ, ಭೀಮಸೇನ ಮಿರ್ಜಿ, ಗುರುರಾಜ ಹಲಗತ್ತಿ, ಅರವಿಂದ ದೇಶಪಾಂಡೆ, ಪ್ರಯಾಗ ಇತರರಿದ್ದರು.