ಪ್ರತಿಭಟನಾ ನಿರತ ರಾಜನಕೋಡಿ ನಿವಾಸಿಗಳನ್ನು ಉದ್ದೇಶಿಸಿ ಪುರಸಭೆ ಮುಖ್ಯಾಧಿಕಾರಿ ಈಶ್ವರ ಸಿದ್ನಾಳ ಮಾತನಾಡಿದರು. ಬಸವರಾಜ ಮಲಕಾಯಿ, ಶಾಮ ಬಡಿಗೇರ ಇತರರಿದ್ದರು.
ಹುಕ್ಕೇರಿ:
ಮುಖಂಡರಾದ ಬಸವರಾಜ ಮಲಕಾಯಿ, ಶ್ಯಾಮ ಬಡಿಗೇರ ಮಾತನಾಡಿ, ಎರಡು ತಿಂಗಳಿನಿಂದ ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ. ಅಧಿಕಾರಿಗಳಿಗೆ
ಶಾಸಕ ನಿಖಿಲ ಕತ್ತಿ ನೀರಿನ ಸಮಸ್ಯೆ ಇರುವ ಕಡೆ ತುರ್ತಾಗಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಸೂಚಿಸಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ.
ಪರಿಸ್ಥಿತಿ ಹೀಗೆಯೇ ಮುಂದುವರಿದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪುರಸಭೆ ಮುಖ್ಯಾಧಿಕಾರಿ ಈಶ್ವರ ಸಿದ್ನಾಳ ಮನವಿ ಸ್ವೀಕರಿಸಿ ಮಾತನಾಡಿ, ಕುಡಿಯುವ ನೀರು ಸರಬರಾಜು ಇಲಾಖೆಯೊಂದಿಗೆ ಚರ್ಚಿಸಿ ನೀರಿನ ಸಮಸ್ಯೆ ಪರಿಹರಿಸಲಾಗುವುದು ಎಂದರು.