ನಗರದ ಗೃಹ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ, ವಿವಿಧ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಆಲಿಸಿ ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷಿ$್ಮ ಹೆಬ್ಬಾಳ್ಕರ್​ ಆಲಿಸಿದರು. ವಿವಿಧ ಗ್ರಾಮದ ಮುಖಂಡರು ಇತರರಿದ್ದರು.  
ಬೆಳಗಾವಿ

ಜನರ ಸಮಸ್ಯೆಗಳಿಗೆ ಕಳಕಳಿಯಿಂದ ಸ್ಪಂದಿಸಿ: ಅಧಿಕಾರಿಗಳಿಗೆ ಹೆಬ್ಬಾಳ್ಕರ್ ಸೂಚನೆ

ಬೆಳಗಾವಿ: ಮಾಜಿ ಸಚಿವೆ ಹಾಗೂ ಗ್ರಾಮೀಣ ೇತ್ರದ ಶಾಸಕಿ ಲಕ್ಷಿ$್ಮ ಹೆಬ್ಬಾಳ್ಕರ್​ ಅವರು ಶನಿವಾರ ನಗರದ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ, ವಿವಿಧ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಆಲಿಸಿ, ಸಂಬಂಧಿತ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಹಲವು ಸಮಸ್ಯೆಗಳಿಗೆ ಸ್ಥಳದಲ್ಲೆ ಪರಿಹಾರ ಸೂಚಿಸಿದರು.
ಈ ವೇಳೆ ಮಾತನಾಡಿದ ಅವರ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಯ ಪ್ರಮುಖ ಕರ್ತವ್ಯವಾಗಿದೆ. ಜನರು ಕಚೇರಿಗೆ ಬಂದಾಗ ಸಾಧ್ಯವಾದಷ್ಟು ಬೇಗ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಪ್ರಯತ್ನಿಸುತ್ತಿದ್ದೇವೆ. ಅಧಿಕಾರಿಗಳು ಕೂಡ ಸಾರ್ವಜನಿಕರ ಅಹವಾಲುಗಳಿಗೆ ಮಾನವೀಯತೆ ಹಾಗೂ ಜವಾಬ್ದಾರಿಯಿಂದ ಸ್ಪಂದಿಸಿ ತ್ವರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಭೂಮಿ, ಕಂದಾಯ, ರಸ್ತೆ, ಕುಡಿಯುವ ನೀರು, ವಿದ್ಯುತ್​, ಸಾಮಾಜಿಕ ಭದ್ರತಾ ಯೋಜನೆಗಳು, ಪಿಂಚಣಿ, ಆರೋಗ್ಯ, ಶಿಣ ಸೇರಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳೊಂದಿಗೆ ಸಾರ್ವಜನಿಕರು ಗೃಹಕಚೇರಿಗೆ ಆಗಮಿಸಿದ್ದರು. ಪ್ರತಿಯೊಂದು ಅರ್ಜಿಯನ್ನು ಪರಿಶೀಲಿಸಿದ ಅವರು ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಜನರಿಗೆ ಅಗತ್ಯ ಕ್ರಮ ವಹಿಸಿದರು.
ಇದೇ ವಿವಿಧ ಗ್ರಾಮಗಳು ಹಾಗೂ ನಗರದ ಹಲವೆಡೆಯಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಜನರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಅವರ ಗಮನಕ್ಕೆ ತಂದರು. ವಿವಿಧ ಗ್ರಾಮಗಳ ಮುಖಂಡರು ಇತರರಿದ್ದರು.