ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನ ಅಧ್ಯಕ್ಷ ಎಚ್.ಎಸ್.ಸೋಂಪೂರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬೆಳಗಾವಿ: ಗಜೇಂದ್ರಗಡದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನ ವತಿಯಿಂದ ಸಂಗೊಳ್ಳಿ ರಾಯಣ್ಣನ 195ನೇ ಹುತಾತ್ಮ ದಿನದ ನಿಮಿತ್ತ ಜ.26ರಂದು ಖಾನಾಪುರ ತಾಲೂಕಿನ ನಂದಗಡದಲ್ಲಿ ರಾಜ್ಯಮಟ್ಟದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಸಸ್ತಿ ಸಮಾರಂಭ ಹಾಗೂ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಎಚ್.ಎಸ್.ಸೋಂಪೂರ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 5 30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು. ಧಾರವಾಡ ರೇವಣಸಿದ್ದೇಶ್ವರ ಮಠದ ಬಸವರಾಜ ದೇವರು, ಕಿತ್ತೂರು ಕಲ್ಮಠದ ರಾಜಗುರು ಮಡಿವಾಳ ಸ್ವಾಮೀಜಿ, ಅವರೊಳ್ಳಿ ರುದ್ರಸ್ವಾಮಿಮಠದ ಚನ್ನಬಸವ ದೇವರು, ನಂದಗಡ ವಿರಕ್ತ ಮಠದ ಚನ್ನವೀರ ದೇವರು ಸಾನ್ನಿಧ್ಯ ವಹಿಸುವರು. ಸಮಾರಂಭದಲ್ಲಿ ಸಮಾಜಮುಖಿ ಕೆಲಸ ಮಾಡಿದ 50 ಜನರಿಗೆ ರಾಯಣ್ಣ ಗೌರವ ಪುರಸ್ಕಾರ ಹಾಗೂ ವಿಶೇಷವಾಗಿ ಒಬ್ಬರಿಗೆ ರಾಜ್ಯಮಟ್ಟದ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ ಮಾಡಲಿದ್ದೇವೆ. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದರು.
ಕರವೇ ಜಿಲ್ಲಾ ಅಧ್ಯಕ್ಷ ದೀಪಕ ಗುಡಗನಟ್ಟಿ, ಮಹದೇವ ತಳವಾರ, ದಶರಥ ಬನೋಶಿ ಇದ್ದರು.