ಬೈಲಹೊಂಗಲ ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಅಪ್ಪಾಸಾಬ ಲಕ್ಕುಂಡಿ ಮಾತನಾಡಿದರು. ಆನಂದಗೌಡ ಪಾಟೀಲ, ಶಿವಾನಂದ ಪಡಸಲಗಿ, ನಾಗಪ್ಪ ಕೆಸರಕೊಪ್ಪ ಇದ್ದರು. 
ಬೆಳಗಾವಿ

ಸರ್ಕಾರಿ ಕನ್ನಡ ಶಾಲೆ ಉಳಿಸಿ

ರಾಘವೇಂದ್ರಗೌಡ ಭೀ ಪಾಟೀಲ್
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವರ್ಷದಿಂದ ವರ್ಷಕ್ಕೆ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಪಡೆಯುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿರುವುದು ದುರ್ದೈವದ ಸಂಗತಿ. ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಮೊರೆ ಹೋಗುತ್ತಿರುವ ಪಾಲಕರು ಕನ್ನಡ ಶಾಲೆಗಳ ಉಳಿವಿಗೆ ಒತ್ತು ನೀಡಬೇಕಿದೆ.
ಬೈಲಹೊಂಗಲ ತಾಲೂಕಿನಲ್ಲಿ ಉತ್ತಮ ಶಿಕ್ಷಣ ನೀಡುವ ಕನ್ನಡ ಮಾಧ್ಯಮ ಶಾಲೆಗಳಿವೆ. ಅಲ್ಲದೆ ಇಂಚಲದಂತಹ ಗ್ರಾಮಗಳಲ್ಲಿ ಶಿವಯೋಗೀಶ್ವರ ಶಿಕ್ಷಣ ಸಂಸ್ಥೆ ಬಡ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳಿಗೆ ಹಲವು ಯೋಜನೆ ನೀಡುತ್ತಿದ್ದು, ಸದುಪಯೋಗ ಪಡಿಸಿಕೊಳ್ಳಬೇಕು ತಿಳಿಸಿದರು.